ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈಗೆ ಬಂದರೆ ಸಾಯುತ್ತೀರಿ.. ಇಂಡಿಗೊ ವಿಮಾನದ ಶೌಚಾಲಯದಲ್ಲಿ ಬೆದರಿಕೆ ಪತ್ರ

ಇಂದು ಬೆಳಿಗ್ಗೆ ಚೆನ್ನೈನಿಂದ ಮುಂಬೈಗೆ ತೆರಳುತ್ತಿದ್ದ ಏರ್ ಇಂಡಿಗೊ ವಿಮಾನದ ಶೌಚಾಲಯದಲ್ಲಿ ಬೆದರಿಕೆ ಪತ್ರವೊಂದು ಪತ್ತೆಯಾಗಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
Published 13 ಫೆಬ್ರುವರಿ 2024, 14:52 IST
Last Updated 13 ಫೆಬ್ರುವರಿ 2024, 14:52 IST
ಅಕ್ಷರ ಗಾತ್ರ

ಮುಂಬೈ: ಇಂದು ಬೆಳಿಗ್ಗೆ ಚೆನ್ನೈನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೊ ವಿಮಾನದ ಶೌಚಾಲಯದಲ್ಲಿ ಬೆದರಿಕೆ ಪತ್ರವೊಂದು ಪತ್ತೆಯಾಗಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಶೌಚಾಲಯದ ಟಿಶ್ಯೂ ಪೇಪರ್‌ನಲ್ಲಿ ‘ಮುಂಬೈಗೆ ಬಂದರೆ ನೀವೆಲ್ಲ ಸಾಯುತ್ತಿರಿ‘ ಎಂದು ಬರೆಯಲಾಗಿತ್ತು. ವಿಮಾನದ ಲ್ಯಾಂಡಿಂಗ್ ವೇಳೆಗೂ ಮುನ್ನ ಇದು ಬೆಳಕಿಗೆ ಬಂದಿದೆ.

ಈ ವಿಷಯ ವಿಮಾನದ ಸಿಬ್ಬಂದಿಯ ಗಮನಕ್ಕೆ ಬಂದ ತಕ್ಷಣ ವಿಮಾನವನ್ನು ತಪಾಸಣೆ ಮಾಡಲಾಯಿತು. ಆದರೆ ಯಾವುದೇ ಸಂದೇಹಾತ್ಮಕ ವಸ್ತುಗಳು ಕಂಡು ಬಂದಿಲ್ಲ. ಈ ಘಟನೆ ಬಗ್ಗೆ ಅಪರಿಚಿತರ ವಿರುದ್ಧ ಐಪಿಸಿ 503 ಕಲಂ ಅಡಿ ಪ್ರಕರಣ ದಾಖಲಾಗಿದೆ ಎಂದು ಮುಂಬೈ ಏರ್‌ಪೋರ್ಟ್ ಪೊಲೀಸ್ ಠಾಣೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಮುಂಬೈ ಏರ್‌ಪೋರ್ಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ತನಿಖೆ ಕೈಗೆತ್ತಿಕೊಂಡಿದ್ದಾರೆ. ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT