ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಳಿ ತಪ್ಪಿದ ಚಾರ್​ಮಿನಾರ್ ಎಕ್ಸ್‌ಪ್ರೆಸ್ ರೈಲು: 6 ಜನರಿಗೆ ಗಾಯ

Published 10 ಜನವರಿ 2024, 6:59 IST
Last Updated 10 ಜನವರಿ 2024, 6:59 IST
ಅಕ್ಷರ ಗಾತ್ರ

ಹೈದರಾಬಾದ್‌: ಚಾರ್​ಮಿನಾರ್ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿದ ಪರಿಣಾಮ 6 ಜನರು ಗಾಯಗೊಂಡಿದ್ದಾರೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ. 

ಬುಧವಾರ ಬೆಳಗ್ಗೆ ಇಲ್ಲಿನ ನಾಂಪಲ್ಲಿಯ ಡೆಕ್ಕನ್‌ ರೈಲು ನಿಲ್ದಾಣದ ಬಳಿ ಚೆನ್ನೈ–ಹೈದರಾಬಾದ್‌ ಚಾರ್​ಮಿನಾರ್ ಎಕ್ಸ್‌ಪ್ರೆಸ್ ರೈಲಿನ ಎರಡು ಭೋಗಿಗಳು ಹಳಿ ತಪ್ಪಿವೆ. ಘಟನೆಯಲ್ಲಿ ದೊಡ್ಡ ಅನಾಹುತ ಸಂಭವಿಸಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ರೈಲು ಕಡಿಮೆ ವೇಗದಲ್ಲಿ ಚಲಿಸುತ್ತಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಗಾಯಗೊಂಡ 6 ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT