ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ 3 ಮರಿಗಳಿಗೆ ಜನ್ಮ ನೀಡಿದ 'ಜ್ವಾಲಾ' ಚೀತಾ

Published 23 ಜನವರಿ 2024, 4:52 IST
Last Updated 23 ಜನವರಿ 2024, 4:52 IST
ಅಕ್ಷರ ಗಾತ್ರ

ನವದೆಹಲಿ: ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದಿಂದ ತಂದಿದ್ದ ಚೀತಾವೊಂದು ಮೂರು ಮರಿಗಳಿಗೆ ಜನ್ಮ ನೀಡಿದೆ.

ಈ ಬಗ್ಗೆ ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ‘ಜ್ವಾಲಾ' ಎಂಬ ಹೆಸರಿನ ಚೀತಾ ಮೂರು ಮರಿಗಳಿಗೆ ಜನ್ಮ ನೀಡಿದೆ. ಕೆಲ ವಾರಗಳ ಹಿಂದೆಯಷ್ಟೇ ನಮೀಬಿಯಾದಿಂದ ತಂದಿದ್ದ ಆಶಾ ಚೀತಾ ತನ್ನ ಮರಿಗಳಿಗೆ ಜನ್ಮ ನೀಡಿತ್ತು ಎಂದು ಹೇಳಿದ್ದಾರೆ.

ಚೀತಾ ಮರಿಗಳ ವಿಡಿಯೊವನ್ನು ಸಹ ಹಂಚಿಕೊಂಡಿದ್ದಾರೆ.

‘ದೇಶದ ಎಲ್ಲಾ ವನ್ಯಜೀವಿ ತಜ್ಞರು ಹಾಗೂ ವನ್ಯಜೀವಿ ಪ್ರೇಮಿಗಳಿಗೆ ಅಭಿನಂದನೆಗಳು. ಭಾರತದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗಲಿ' ಎಂದು ಅವರು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಜನವರಿ 3ರಂದು ಆಶಾ ಚೀತಾ ಮೂರು ಮರಿಗಳಿಗೆ ಜನ್ಮ ಜನ್ಮನೀಡಿತ್ತು. ಇದಕ್ಕೂ ಮುನ್ನ ಕಳೆದ ಮಾರ್ಚ್‌ನಲ್ಲಿ ಸಿಯಾಯಾ ಎಂಬ ಚೀತಾ 4 ಮರಿಗಳಿಗೆ ಜನ್ಮ ನೀಡಿತ್ತು . ಆದರೆ, ಅವುಗಳಲ್ಲಿ ಒಂದು ಮಾತ್ರ ಬದುಕುಳಿದಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 'ಪ್ರಾಜೆಕ್ಟ್ ಚೀತಾ' ಯೋಜನೆಯಡಿ ನಮೀಬಿಯಾದಿಂದ ಭಾರತಕ್ಕೆ ಚೀತಾಗಳನ್ನು ‌ಸ್ಥಳಾಂತರಿಸಲಾಗಿದೆ. ಇದು ಸ್ವತಂತ್ರ ಭಾರತದಲ್ಲಿ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನು ಮರು-ಪರಿಚಯಿಸುವ ಗುರಿಯನ್ನು ಹೊಂದಿದೆ.

ಮೊದಲ ಹಂತದಲ್ಲಿ ನಮೀಬಿಯಾದಿಂದ 8 ಚೀತಾಗಳನ್ನು 2022ರ ಸೆಪ್ಟೆಂಬರ್‌ನಲ್ಲಿ ಭಾರತಕ್ಕೆ ತರಲಾಗಿತ್ತು. ಬಳಿಕ ಕಳೆದ ಫೆಬ್ರುವರಿಯಲ್ಲಿ ದಕ್ಷಿಣ ಆಫ್ರಿಕಾದಿಂದ 12 ಚೀತಾಗಳನ್ನು ತರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT