ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಕುಡಿದ ಮತ್ತಿನಲ್ಲಿ ಯುವತಿಯರ ರಂಪಾಟ: ಪೊಲೀಸರೊಂದಿಗೆ ಜಗಳ, ಬಂಧನ

Published 10 ಮೇ 2024, 7:33 IST
Last Updated 10 ಮೇ 2024, 7:33 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ಗುರುವಾರ ತಡರಾತ್ರಿ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದ ವೇಳೆ ಕುಡಿದ ಮತ್ತಿನಲ್ಲಿದ್ದ ಮೂವರು ಯುವತಿಯರು ರಂಪಾಟ ಮಾಡಿದ್ದಾರೆ.

ಕುಡಿದು ವಾಹನ ಚಲಾಯಿಸುವವರ ಪತ್ತೆಗಾಗಿ ಪಾಲ್ಘರ್‌ನ ವಿರಾರ್‌ ಪ್ರದೇಶದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದರು. ಇದೇ ವೇಳೆ ಯುವತಿಯರು ಪೊಲೀಸರೊಂದಿಗೆ ವಾಗ್ವಾದ ನಡೆಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಯುವತಿಯರು ಪೊಲೀಸ್ ಅಧಿಕಾರಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದು, ದೌರ್ಜನ್ಯ ನಡೆಸುತ್ತಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.

ಸದ್ಯ ಯುವತಿಯರನ್ನು ಬಂಧಿಸಿರುವ ಪೊಲೀಸರು, ಐಪಿಸಿ ಸೆಕ್ಷನ್ 353, 323, 325, 504, 506 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT