ರಾಜಸ್ಥಾನ : 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರಗೈದು, ಕಲ್ಲಿದ್ದಲು ಕುಲುಮೆಯಲ್ಲಿ ಸುಟ್ಟು ಹಾಕಿದ ಘಟನೆ ಬಿಲ್ವಾರಾ ಜಿಲ್ಲೆಯಲ್ಲಿ ನಡೆದಿದೆ. ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿ ತಂದೆಯನ್ನು ಹುಡುಕಲು ಹೋದಾಗ ನಾಪತ್ತೆಯಾಗಿರುವ ಬಗ್ಗೆ ಕುಟುಂಬ ಸದಸ್ಯರು ಪೊಲೀಸರಿಗೆ ದೂರು ನೀಡಿದ್ದರು.
ಕುಟುಂಬ ಸದಸ್ಯರು ಬಾಲಕಿಯನ್ನು ಹುಡುಕಲು ಆರಂಭಿಸಿದಾಗ ಕಲ್ಲಿದ್ದಲು ಕುಲುಮೆಯ ಬಳಿ ಮಾನವನ ಮೂಳೆಗಳು ಪತ್ತೆಯಾಗಿದ್ದು, ಮಳೆಯ ನಡುವೆಯೂ ಬೆಂಕಿ ಹೊತ್ತಿ ಉರಿಯುತ್ತಿರುವುದನ್ನು ನೋಡಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಬಾಲಕಿಯ ಶೂ ಮತ್ತು ಬಳೆಗಳನ್ನು ಡಿಎನ್‌ಎ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ಮುಂದುವರೆಸಲಾಗಿದೆ, ಘಟನೆಗೆ ಸಂಬಂಧಿಸಿ ಮೂವರನ್ನು ಬಂಧಿಸಿ ವಿಚಾರಣೆ ಮಾಡಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಆದರ್ಶ್ ಸಿಂಧು ತಿಳಿಸಿದ್ದಾರೆ.