ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಪ್ರಾಪ್ತ ಚಲಾಯಿಸುತ್ತಿದ್ದ ಕಾರು ಡಿಕ್ಕಿ ಹೊಡೆದು ಮೂವರಿಗೆ ಗಾಯ

Published 29 ಜೂನ್ 2024, 5:43 IST
Last Updated 29 ಜೂನ್ 2024, 5:43 IST
ಅಕ್ಷರ ಗಾತ್ರ

ನವದೆಹಲಿ: ಅ‍ಪ್ರಾಪ್ತನೊಬ್ಬ ಚಲಾಯಿಸುತ್ತಿದ್ದ ಕಾರು ಡಿಕ್ಕಿ ಹೊಡೆದು ಮೂವರು ಗಾಯಗೊಂಡಿರುವ ಘಟನೆ ದೆಹಲಿಯ ಗೀತಾ ಕಾಲೊನಿ ಪ್ರದೇಶದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರತಾಪ್‌ಗಂಜ್ ರಸ್ತೆಯಲ್ಲಿ ಬೆಳಿಗ್ಗೆ 7.30ಕ್ಕೆ ಘಟನೆ ಸಂಭವಿಸಿದೆ.

ಕೃಷ್ಣನಗರದ ಕಡೆಗೆ ತೆರಳುತ್ತಿದ್ದ ಬಲೇನೊ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಮೂವರಿಗೆ ಡಿಕ್ಕಿ ಹೊಡೆದಿದೆ. 16 ವರ್ಷದ ಬಾಲಕ ಕಾರು ಚಲಾಯಿಸುತ್ತಿದ್ದ. ಆರೋಪಿಯ ಅಪ್ರಾಪ್ತ ಸ್ನೇಹಿತನೂ ಕಾರಿನಲ್ಲಿ ಇದ್ದ. ಸ್ಥಳೀಯರು ಇವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಕಾರು ಬಾಲಕನ ತಂದೆಯ ಹೆಸರಿನಲ್ಲಿ ನೋಂದಣಿಯಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT