ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣಿಪುರ: ಮತಗಟ್ಟೆ ಬಳಿ ಗುಂಡಿನ ದಾಳಿ ನಡೆಸಿದ ಮೂವರ ಬಂಧನ

Published 20 ಏಪ್ರಿಲ್ 2024, 6:19 IST
Last Updated 20 ಏಪ್ರಿಲ್ 2024, 6:19 IST
ಅಕ್ಷರ ಗಾತ್ರ

ಇಂಫಾಲ(ಮಣಿಪುರ): ಇಂಫಾಲ್ ಪೂರ್ವ ಜಿಲ್ಲೆಯ ಮತಗಟ್ಟೆಯ ಬಳಿ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದ ಮೂವರು ದುಷ್ಕರ್ಮಿಗಳನ್ನು ಮಣಿಪುರ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶುಕ್ರವಾರ ಮೊಯಿರಂಗ್ಯಾಂಪು ಸಾಜೆಬ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಬಂಧಿತ ವ್ಯಕ್ತಿಗಳು ಭಾಗಿಯಾಗಿದ್ದು, ಘಟನೆಯಲ್ಲಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

‘ಗುಂಡಿನ ದಾಳಿ ನಂತರ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದು, ಶುಕ್ರವಾರ ಸಂಜೆ ಘಟನಾ ಸ್ಥಳದಿಂದ 5 ಕೀ.ಮೀ ದೂರದಲ್ಲಿ ಅವರನ್ನು ಬಂಧಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರಿಂದ 22 ಪಿಸ್ತೂಲ್‌ಗಳು ಮತ್ತು ₹15 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ.

ಮೊದಲ ಹಂತದ ಮತದಾನದಲ್ಲಿ ಮಣಿಪುರದಲ್ಲಿ ಶೇ.68ರಷ್ಟು ಮತ ಪ್ರಮಾಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT