ಮುಂಬೈ: ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹6.28 ಕೋಟಿ ಮೌಲ್ಯದ 7 ಕೆ.ಜಿ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದು, ಮೂವರು ಇರಾನ್ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಬಂಧಿತರು ದುಬೈನಿಂದ ಆಗಮಿಸುತ್ತಿದ್ದ ವೇಳೆ ಖಚಿತ ಮಾಹಿತಿ ಆಧರಿಸಿ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಯಿತು ಎಂದು ಡಿಆರ್ಐ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಂಧಿತರ ಬಳಿಯಿದ್ದ ಲ್ಯಾಗೇಜ್ ಪರಿಶೀಲನೆ ನಡೆಸಿದಾಗ ತಲಾ 1 ಕೆ.ಜಿ ತೂಕದ ಏಳು ಚಿನ್ನದ ಗಟ್ಟಿಗಳು ಸೇರಿದಂತೆ ವಿದೇಶಿ ನಿರ್ಮಿತ ಇತರೆ ಚಿನ್ನಾಭರಣಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ಕಸ್ಟಮ್ಸ್ ಕಾಯ್ದೆಯಡಿ ಮೂವರನ್ನು ಬಂಧಿಸಲಾಗಿದ್ದು, ಕಳ್ಳಸಾಗಣೆ ಜಾಲದ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.