ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈಕೋರ್ಟ್‌ನ ಮೂವರು ನ್ಯಾಯಮೂರ್ತಿಗಳ ವರ್ಗಾವಣೆ, ಐವರಿಗೆ ಬಡ್ತಿ

Published 19 ಮಾರ್ಚ್ 2024, 2:14 IST
Last Updated 19 ಮಾರ್ಚ್ 2024, 2:14 IST
ಅಕ್ಷರ ಗಾತ್ರ

ನವದೆಹಲಿ: ಮೂವರು ನ್ಯಾಯಮೂರ್ತಿಗಳನ್ನು ವಿವಿಧ ಹೈಕೋರ್ಟ್‌ಗಳಿಗೆ ವರ್ಗಾವಣೆ ಮಾಡಲಾಗಿದ್ದು, ಜತೆಗೆ ಐವರು ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ಖಾಯಂ ನ್ಯಾಯಮೂರ್ತಿಗಳಾಗಿ ಸೋಮವಾರ ಬಡ್ತಿ ನೀಡಲಾಗಿದೆ.

ಕಾನೂನು ಸಚಿವಾಲಯದ ಅಧಿಸೂಚನೆಗಳ ಪ್ರಕಾರ, ಮಧ್ಯಪ್ರದೇಶ ಹೈಕೋರ್ಟ್‌ನ ನ್ಯಾಯಮೂರ್ತಿ ಸುಜೋಯ್ ಪಾಲ್ ಮತ್ತು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ ಮೌಶುಮಿ ಭಟ್ಟಾಚಾರ್ಯ ಅವರನ್ನು ತೆಲಂಗಾಣ ಹೈಕೋರ್ಟ್‌ಗೆ ವರ್ಗಾಯಿಸಲಾಗಿದೆ. ಅದೇ ರೀತಿ ಕೇರಳ ಹೈಕೋರ್ಟ್‌ನ ನ್ಯಾಯಮೂರ್ತಿ ಅನು ಶಿವರಾಮನ್ ಅವರನ್ನು ಕರ್ನಾಟಕ ಹೈಕೋರ್ಟ್‌ಗೆ ನಿಯೋಜಿಸಲಾಗಿದೆ.

ಅಲಹಾಬಾದ್ ಹೈಕೋರ್ಟ್‌ನ ಐವರು ಹೆಚ್ಚುವರಿ ನ್ಯಾಯಾಧೀಶರಿಗೆ ಖಾಯಂ ನ್ಯಾಯಮೂರ್ತಿಗಳಾಗಿ ಬಡ್ತಿ ನೀಡಲಾಗಿದೆ. ಅವರಲ್ಲಿ ನ್ಯಾಯಮೂರ್ತಿಗಳಾದ ಸೌರಭ್ ಶ್ರೀವಾಸ್ತವ್‌, ಓಂ ಪ್ರಕಾಶ್ ಶುಕ್ಲಾ, ಮೊಹಮ್ಮದ್ ಅಜರ್ ಹುಸೇನ್ ಇದ್ರಿಸಿ, ಜ್ಯೋತ್ಸ್ನಾ ಶರ್ಮಾ ಮತ್ತು ಸುರೇಂದ್ರ ಸಿಂಗ್ ಸೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT