ಶನಿವಾರ, 14 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದೆಹಲಿ | ರಸ್ತೆ ಬದಿ ಮಲಗಿದ್ದ ಐವರ ಮೇಲೆ ಹರಿದ ಟ್ರಕ್, ಮೂವರು ಸ್ಥಳದಲ್ಲೇ ಸಾವು

Published : 26 ಆಗಸ್ಟ್ 2024, 6:00 IST
Last Updated : 26 ಆಗಸ್ಟ್ 2024, 6:00 IST
ಫಾಲೋ ಮಾಡಿ
Comments

ನವದೆಹಲಿ: ದೆಹಲಿಯ ಶಾಸ್ತ್ರಿನಗರ ಪ್ರದೇಶದಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದವರ ಮೇಲೆ ಟ್ರಕ್ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿರುವ ತರ್ಬುಜ್ ಮಾರುಕಟ್ಟೆಯಲ್ಲಿ ಅಪಘಾತ ಸಂಭವಿಸಿರುವ ಕುರಿತು ಮುಂಜಾನೆ 4.56ಕ್ಕೆ ದೂರವಾಣಿ ಕರೆ ಬಂದಿತ್ತು. ಸೀಲಾಂಪುರದಿಂದ ಬರುತ್ತಿದ್ದ ಟ್ರಕ್ ಮಲಗಿದ್ದ ಐವರ ಮೇಲೆ ಹರಿದಿದೆ. ಘಟನೆ ಬಳಿಕ ಚಾಲಕ ಟ್ರಕ್ ಅನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ’ ಎಂದು ಈಶಾನ್ಯ ದೆಹಲಿಯ ಡಿಸಿಪಿ ಡಾ ಜಾಯ್ ಟಿರ್ಕಿ ತಿಳಿಸಿದ್ದಾರೆ.

ಮೃತರ ಗುರುತು ಪತ್ತೆ ಹಚ್ಚಲು ಪ್ರಯತ್ನಿಸಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡಿರುವ ಮುಸ್ತಾಕ್ ಮತ್ತು ಕಮಲೇಶ್‌ರನ್ನು ಜೆಪಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಘಟನೆ ಸಂಬಂಧ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈಚೆಗೆ ಚೆನ್ನೈನ ಬೆಸೆಂಟ್‌ ನಗರದ ಡೌನ್‌ಟೌನ್‌ ರಸ್ತೆಯ ಪಾದಚಾರಿ ಮಾರ್ಗದಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ವೈಎಸ್‌ಆರ್‌ ಕಾಂಗ್ರೆಸ್‌ನ ರಾಜ್ಯಸಭಾ ಸಂಸದ ಬೀದ ಮಸ್ತಾನ್‌ ರಾವ್‌ ಅವರ ಪುತ್ರಿ ಬೀದ ಮಾಧುರಿ ಕಾರು ಹರಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯು ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT