ಚಂಡೀಗಢ: ಹರಿಯಾಣದ ಪಂಚಕುಲದ ಹೋಟೆಲ್ ಒಂದರ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ದುಷ್ಕರ್ಮಿಗಳು ಓರ್ವ ಮಹಿಳೆ ಸೇರಿದಂತೆ ಮೂವರನ್ನು ಗುಂಡಿಕ್ಕಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
.ಜಾರ್ಖಂಡ್: ಗುಂಡಿಕ್ಕಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ .
ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ದೆಹಲಿಯ ವಿಕ್ಕಿ, ವಿಪಿನ್ ಮತ್ತು ಹಿಸಾರ್ನ ನಿಯಾ ಮೃತರು ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆಗೀಡಾದ ಮೂವರು ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಲು ಬಂದಿದ್ದರು ಎಂದು ಪಂಚಕುಲದ ಸಹಾಯಕ ಪೊಲೀಸ್ ಆಯುಕ್ತ (ಅಪರಾಧ) ಅರವಿಂದ್ ಕಾಂಬೋಜ್ ತಿಳಿಸಿದ್ದಾರೆ.

30ರ ಆಸುಪಾಸಿನ ವಯಸ್ಸಿನ ವಿಕ್ಕಿ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದು, ಕೆಲವು ಪ್ರಕರಣಗಳನ್ನು ಎದುರಿಸುತ್ತಿದ್ದ ಎಂದು ಅವರು ಹೇಳಿದ್ದಾರೆ.
.ಮೆಕ್ಸಿಕೋ: ಪಾನಮತ್ತ 16ರ ಬಾಲಕನಿಂದ ಗುಂಡಿಕ್ಕಿ ಕುಟುಂಬದ ನಾಲ್ವರ ಹತ್ಯೆ!.
‘ನಾವು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡುತ್ತಿದ್ದೇವೆ. ಇತರ ಸುಳಿವುಗಳನ್ನು ಸಂಗ್ರಹಿಸುತ್ತಿದ್ದೇವೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

ಹತ್ಯೆಯ ಹಿಂದಿನ ಉದ್ದೇಶ ತಕ್ಷಣವೇ ಸ್ಪಷ್ಟವಾಗಿಲ್ಲವಾದರೂ, ಹಳೆ ದ್ವೇಷ ಇರಬಹುದು ಎಂದು ಶಂಕಿಸಿದ್ದಾರೆ.
.ಪೋಲಿಯೊ ನಿರ್ಮೂಲನೆ ಅಭಿಯಾನಕ್ಕೆ ಚಾಲನೆ: ಪಾಕ್ನಲ್ಲಿ ಗುಂಡಿಕ್ಕಿ ಇಬ್ಬರ ಹತ್ಯೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.