ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಂಡೀಗಢ: ಪಾತಕಿಗಳ ಸಹಚರರ ಬಂಧನ

Published 27 ಜೂನ್ 2024, 16:24 IST
Last Updated 27 ಜೂನ್ 2024, 16:24 IST
ಅಕ್ಷರ ಗಾತ್ರ

ಚಂಡೀಗಢ: ಪಾತಕಿಗಳಾದ ಲಾರೆನ್ಸ್ ಬಿಷ್ಣೊಯಿ ಮತ್ತು ಗೋಲ್ಡಿ ಬ್ರಾರ್‌ ಜೊತೆ ನಂಟು ಹೊಂದಿರುವ ಮೂವರನ್ನು ಪಂಜಾಬ್ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಈ ಬಂಧನದ ಕಾರಣದಿಂದಾಗಿ ರಾಜ್ಯದಲ್ಲಿ ಕೆಲವರನ್ನು ಗುರಿಯಾಗಿಸಿಕೊಂಡು ನಡೆಯಬಹುದಿದ್ದ ಹತ್ಯೆಗಳನ್ನು ತಡೆದಂತೆ ಆಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಕರಣದೀಪ್ ಸಿಂಗ್ ಅಲಿಯಾಸ್ ಕಣ್ಣು, ರಘುವೀರ್ ಸಿಂಗ್ ಮತ್ತು ಕುಲ್ವಿಂದರ್ ಸಿಂಗ್ ಅಲಿಯಾಸ್ ಬಿಟ್ಟು ಬಂಧಿತರು. 

ಲಾರೆನ್ಸ್‌ ಬಿಷ್ಣೋಯಿ ಮತ್ತು ಗೊಲ್ಡಿ ಬ್ರಾರ್‌ ಸಹಚರರು ಭಟಿಂಡಾ, ಮೊಹಾಲಿ ಮತ್ತು ಅದರ ಸುತ್ತಲಿನ ಕೆಲವು ಪ್ರದೇಶಗಳಲ್ಲಿ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂಬ ಗುಪ್ತಚರ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

ಈ ಮೂವರು ಮೌರ್‌ನಿಂದ ಭಟಿಂಡಾ ಕಡೆ ಕಾರಿನಲ್ಲಿ ಬರುತ್ತಿದ್ದಾಗ ಪೊಲೀಸರು ಅವರನ್ನು ಬಂಧಿಸಿದರು. ಅವರಿಂದ ಮೂರು ಪಿಸ್ತೂಲುಗಳು ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT