ಶುಕ್ರವಾರ, 21 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ದೆಹಲಿ: ನೂರಕ್ಕೂ ಅಧಿಕ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರ ಬಂಧನ

Published 11 ಜೂನ್ 2024, 5:14 IST
Last Updated 11 ಜೂನ್ 2024, 5:14 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ, ಉತ್ತರಪ್ರದೇಶ, ರಾಜಸ್ಥಾನ ಸೇರಿ ಹಲವು ರಾಜ್ಯಗಳಲ್ಲಿ ನೂರಕ್ಕೂ ಹೆಚ್ಚು ಕಳ್ಳತನದ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣಗಳ ಮಾಸ್ಟರ್‌ ಮೈಂಡ್‌ ಜಹೀದ್‌ ಅಲಿ (45), ಆಜಾದ್‌ (27), ಅಭಿಷೇಕ್‌ (24) ಎನ್ನುವರು ಬಂಧಿತರು. 

ಬಂಧಿತರು, ಉತ್ತರ ದೆಹಲಿಯ ಸಬ್ಜಿ ಮಂಡಿ ಪ್ರದೇಶದ ಮನೆಯೊಂದರಲ್ಲಿ ಮೇ 6 ರಂದು ₹3 ಲಕ್ಷ ಹಗಲು ದರೋಡೆಯನ್ನೂ ಮಾಡಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಆಜಾದ್ ಮತ್ತು ಅಭಿಷೇಕ್ ಮನೆ ಅಥವಾ ಅಂಗಡಿಗೆ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಅಲಿ ಕಾರಿನಲ್ಲಿ ಅವರನ್ನು ಹಿಂಬಾಲಿಸುತ್ತಿದ್ದರು. ಕಾರಿಗೆ ಪೋಲೀಸ್ ಸೈರನ್ ಮತ್ತು ಡ್ಯಾಶ್‌ಬೋರ್ಡ್‌ನಲ್ಲಿ ಲೈಟ್ ಅಳವಡಿಸಲಾಗಿತ್ತು, ಇದರಿಂದ ಅವರು ದೆಹಲಿಯ ಪೊಲೀಸ್ ಅಧಿಕಾರಿಯಂತೆ ನಟಿಸಿ ಸಾರ್ವಜನಿಕರನ್ನು ನಂಬಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT