ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಛತ್ತೀಸಗಢ: ಮೂವರು ನಕ್ಸಲರ ಬಂಧನ

Published 9 ಜನವರಿ 2024, 15:34 IST
Last Updated 9 ಜನವರಿ 2024, 15:34 IST
ಅಕ್ಷರ ಗಾತ್ರ

ಸುಕ್ಮಾ(ಛತ್ತೀಸಗಢ): ಕಳೆದ ತಿಂಗಳು ಸಿಆರ್‌ಪಿಎಫ್‌ ತಂಡದ ಮೇಲೆ ನಡೆದ ದಾಳಿಯಲ್ಲಿ‌ ಭಾಗಿಯಾಗಿದ್ದರು ಎನ್ನಲಾದ ಮೂವರು ನಕ್ಸಲರನ್ನು ಸುಕ್ಮಾ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದರು.

ಪಂದುಮೇಟಾ ಪರ್ವತ ಪ್ರದೇಶದಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಸೇರಿದಂತೆ ಭದ್ರತಾ ಪಡೆಗಳು  ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಡಕಂ ಹಂಡ (35), ಮಿದಿಯಂ ಪೋಡಿಯಾ (38) ಮತ್ತು ಕೊರ್ಸಾ ಧುರ್ವಾ (21) ಬಂಧಿತರು.

ಕಳೆದ ತಿಂಗಳು ಸಿಆರ್‌ಪಿಎಫ್‌ ತಂಡದ ಮೇಲೆ ನಡೆದ ದಾಳಿಯಲ್ಲಿ ಅಧಿಕಾರಿಯೊಬ್ಬರು ಮೃತಪಟ್ಟು, ಕಾನ್‌ಸ್ಟೆಬಲ್ ಗಾಯಗೊಂಡಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT