ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಛತ್ತೀಸಗಢ: ಕಂಕೇರ್ ಜಿಲ್ಲೆಯಲ್ಲಿ ಮೂವರು ನಕ್ಸಲರ ಹತ್ಯೆ

Published 25 ಫೆಬ್ರುವರಿ 2024, 5:31 IST
Last Updated 25 ಫೆಬ್ರುವರಿ 2024, 5:31 IST
ಅಕ್ಷರ ಗಾತ್ರ

ಕಂಕೇರ್: ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಭದ್ರತಾ ಪಡೆ ಜೊತೆಗಿನ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲರು ಹತರಾಗಿದ್ದಾರೆ.

ಕೊಯಲಿಬೀಡಾ ಪ್ರದೇಶದ ಕಾಡಿನಲ್ಲಿ ಜಿಲ್ಲಾ ಮೀಸಲು ಪಡೆ ಮತ್ತು ಗಡಿ ಭದ್ರತಾ ಪಡೆಗಳು ನಡೆಸುತ್ತಿದ್ದ ನಕ್ಸಲ್ ವಿರೋಧಿ ಜಂಟಿ ಕಾರ್ಯಾಚರಣೆ ವೇಳೆ ಮೂವರು ನಕ್ಸಲರನ್ನು ಕೊಲ್ಲಲಾಗಿದೆ ಎಂದು ಕಂಕೇರ್ ಪೊಲೀಸ್ ವರಿಷ್ಠಾಧಿಕಾರಿ ಇಂದಿರಾ ಕಲ್ಯಾಣ್ ಎಲೆಸೆಲಾ ತಿಳಿಸಿದ್ದಾರೆ.

ಎನ್‌ಕೌಂಟರ್ ಸ್ಥಳದಿಂದ ಇಲ್ಲಿಯವರೆಗೆ ಮೂವರು ನಕ್ಸಲರ ಶವಗಳು ಮತ್ತು ಎರಡು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT