ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಛತ್ತೀಸಗಢದಲ್ಲಿ ಎನ್‌ಕೌಂಟರ್‌: ಇಬ್ಬರು ಮಹಿಳೆಯರು ಸೇರಿದಂತೆ ಮೂವರು ನಕ್ಸಲರ ಹತ್ಯೆ

Published 20 ಜನವರಿ 2024, 10:48 IST
Last Updated 20 ಜನವರಿ 2024, 10:48 IST
ಅಕ್ಷರ ಗಾತ್ರ

ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲರು ಸೇರಿದಂತೆ ಮೂವರು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯ ರಾಜಧಾನಿ ರಾಯಪುರದಿಂದ 400 ಕಿ.ಮೀ ದೂರದಲ್ಲಿರುವ ಬಸಗುಡ ಪೊಲೀಸ್ ಠಾಣೆ ವ್ಯಾಪ್ತಿಯ ಬೆಲಂ ಗುಟ್ಟಾ ಬೆಟ್ಟಗಳಲ್ಲಿ ಬೆಳಗ್ಗೆ 8 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯ ಪೊಲೀಸ್‌ನ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ) ಮತ್ತು ಸಿಆರ್‌ಪಿಎಫ್‌ನ ಮುಖ್ಯ ಘಟಕ `ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್' (ಕೋಬ್ರಾ) ಸಿಬ್ಬಂದಿ ಈ ಪ್ರದೇಶದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದೆ ಎಂದು ಅವರು ಹೇಳಿದ್ದಾರೆ.

ಬಲಂ ನೇದ್ರಾ ಅರಣ್ಯದಲ್ಲಿ ಹಿರಿಯ ನಾಯಕರಾದ ವಿನೋದ್ ವರ್ಮಾ, ರಾಜು ಪುಣೆಂ, ವಿಶ್ವನಾಥ್ ಮತ್ತು ಗುಡ್ಡು ತೇಲಂ ಸೇರಿದಂತೆ ಮದ್ದೇಡ್ ಪ್ರದೇಶ ಸಮಿತಿಯ ನಕ್ಸಲರು ಇರುವ ಬಗ್ಗೆ ಭದ್ರತಾ ಪಡೆಗಳಿಗೆ ಗುಪ್ತಚರ ಮಾಹಿತಿ ಸಿಕ್ಕಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಗುಂಡಿನ ಚಕಮಕಿಯಲ್ಲಿ ಹತರಾದ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ನಕ್ಸಲರ ಶವಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು, ಸ್ಫೋಟಕಗಳು, ನಕ್ಸಲ್ ಸಮವಸ್ತ್ರ ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹತ್ಯೆಯಾದ ನಕ್ಸಲರ ಗುರುತು ಇನ್ನೂ ಪತ್ತೆಯಾಗಿಲ್ಲ. ಹತ್ತಿರದ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT