ಶ್ರೀನಗರ: ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಭಾನುವಾರ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಮೂವರು ಯೋಧರು ಸೋಮವಾರ ಸಾವನ್ನಪ್ಪಿದ್ದು, ಹುತಾತ್ಮ ಯೋಧರ ಸಂಖ್ಯೆ ಎಂಟಕ್ಕೆ ಏರಿದೆ.
ಗಂಭೀರವಾಗಿ ಗಾಯಗೊಂಡಿದ್ದ ಯೋಧರನ್ನು ಇಲ್ಲಿನ ಸೇನಾಪಡೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾಲ್ವರು ಭಾನುವಾರ ರಾತ್ರಿ ಕೊನೆಯುಸಿರೆಳೆದರೆ, ಸೋಮವಾರ ಮೂವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಐವರು ಉಗ್ರರು ಹಾಗೂ ಒಬ್ಬ ಯೋಧ ಸ್ಥಳದಲ್ಲೇ ಮೃತಪಟ್ಟಿದ್ದರು.