ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಬಸಂತಗಡದಲ್ಲಿ ಭದ್ರತಾ ಪಡೆಗಳು ಬುಧವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರು ಮೃತಪಟ್ಟಿದ್ದಾರೆ.
ಉಗ್ರರು ಅಡಗಿರುವ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದವು.
ಕಠುವಾ–ಬಸಂತಗಡದ ಗಡಿಯಲ್ಲಿ ಅಡಗಿದ್ದ ಉಗ್ರರು ಭದ್ರತಾ ಪಡೆಗಳ ಮೇಲೆ ಮಧ್ಯಾಹ್ನ 12.50ರ ವೇಳೆಯಲ್ಲಿ ಗುಂಡಿನ ದಾಳಿ ನಡೆಸಿದರು. ಸೇನೆಯು ನಡೆಸಿದ ಪ್ರತಿ ದಾಳಿಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ.