ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಛತ್ತೀಸಗಢದಲ್ಲಿ ಎನ್‌ಕೌಂಟರ್‌: ಮೂವರು ಮಹಿಳಾ ನಕ್ಸಲರ ಹತ್ಯೆ

Published 29 ಆಗಸ್ಟ್ 2024, 9:27 IST
Last Updated 29 ಆಗಸ್ಟ್ 2024, 9:27 IST
ಅಕ್ಷರ ಗಾತ್ರ

ನಾರಾಯಣಪುರ: ಛತ್ತೀಸಗಢದ ನಾರಾಯಣಪುರ್‌ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆ ಗುರುವಾರ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಮಹಿಳಾ ನಕ್ಸಲರು ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ನಾರಾಯಣಪುರ್ ಹಾಗೂ ಕಂಕೇರ್‌ ಜಿಲ್ಲೆಯ ಅಬ್ದುಜಮಾಡ್‌ ಪ್ರದೇಶದಲ್ಲಿ ಬೆಳಿಗ್ಗೆ 8 ಗಂಟೆಗೆ ಭದ್ರತಾ ಪಡೆಗಳ ಜಂಟಿ ತಂಡ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆಯಿತು. ವಿಶೇಷ ಟಾಸ್ಕ್‌ಫೋರ್ಸ್ (ಎಸ್‌ಟಿಎಫ್‌), ಜಿಲ್ಲಾ ಮೀಸಲು ಪೊಲೀಸ್‌ ಪಡೆ (ಡಿಆರ್‌ಜಿ) ಹಾಗೂ ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ಯೋಧರು ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದರು ಎಂದರು.

ಸಮವಸ್ತ್ರ ಧರಿಸಿದ್ದ ಮೂವರು ಮಹಿಳಾ ನಕ್ಸಲರ ಮೃತದೇಹಗಳು ಪತ್ತೆಯಾಗಿವೆ. ಸ್ಥಳದಿಂದ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

‘ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಈ ವರ್ಷ ರಾಜ್ಯದ ವಿವಿಧೆಡೆ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ 145 ಮಂದಿ ನಕ್ಸಲರು ಮೃತಪಟ್ಟಿದ್ದಾರೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT