ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಾಜವಾದಿ ಪಕ್ಷದ ನಾಯಕನ ಮೇಲೆ ಚಪ್ಪಲಿ ಎಸೆತ: ಬಿಜೆಪಿಯನ್ನು ದೂಷಿಸಿದ ಅಖಿಲೇಶ್‌

Published 22 ಆಗಸ್ಟ್ 2023, 4:27 IST
Last Updated 22 ಆಗಸ್ಟ್ 2023, 4:27 IST
ಅಕ್ಷರ ಗಾತ್ರ

ಲಖನೌ: ಸಮಾಜವಾದಿ ಪಕ್ಷದ ಹಿಂದುಳಿದ ವರ್ಗಗಳ ಹಿರಿಯ ನಾಯಕ ಸ್ವಾಮಿ ಪ್ರಸಾದ್‌ ಮೌರ್ಯ ಅವರನ್ನು ಗುರಿಯಾಗಿಸಿಕೊಂಡು ಚಪ್ಪಲಿ ಎಸೆದಿದ್ದಾರೆಂದು ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್‌ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಮಾವೇಶವನ್ನು ಹಾಳು ಮಾಡಲು, ಹಿಂದುಳಿದ ವರ್ಗದ ನಾಯಕರಿಗೆ ಅಗೌರವ ತೋರಲು ಬಿಜೆಪಿ ಸೂಚನೆ ಮೇರೆಗೆ ಈ ಘಟನೆ ನಡೆದಿದೆ ಅಖಿಲೇಶ್‌ ಯಾದವ್‌ ಆರೋಪಿಸಿದ್ದಾರೆ.

ಶೂನ್ಯ ಸಹಿಷ್ಣುತೆ ಬಗ್ಗೆ ಮಾತನಾಡುತ್ತಾರೆ, ಆದರೆ ಇಲ್ಲಿ ಯಾವುದೇ ಸಹಿಷ್ಣುತೆಯ ಭಾವನೆ ಇಲ್ಲ. ಯಾರೊಬ್ಬರು ಕಾರ್ಯಕ್ರಮಕ್ಕೆ ಬಂದು ಹಿರಿಯ ನಾಯಕರಿಗೆ ಅಗೌರವ ತೋರಿದ್ದಾರೆ. ನಾವು ಜನಪ್ರತಿನಿಧಿಗಳು, ಜನರಿಗೆ ಉತ್ತರ ನೀಡಬೇಕಾದವರು, ಆದರೆ ನಾವೇ ಸುರಕ್ಷಿತವಾಗಿಲ್ಲ. ಹೀಗಿದ್ದಾಗ ಜನರಿಗೆ ಏನೆಂದು ಉತ್ತರಿಸುವುದು ಎಂದು ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರವು ನಾಯಕರಿಗೆ ಭದ್ರತೆ ಒದಗಿಸಬೇಕೆಂದು ಅಖಿಲೇಶ್ ತಿಳಿಸಿದ್ದಾರೆ.

ನಗರದಲ್ಲಿ ಸೋಮವಾರ ನಡೆದ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಮೌರ್ಯ ಅವರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬರು ಚಪ್ಪಲಿ ಎಸೆದಿದ್ದರು. ಆರೋಪಿಯನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ ಎಂದು ಎನ್‌ಡಿ ಟಿವಿ ವರದಿ ಮಾಡಿದೆ.

2022ರ ಉತ್ತರ ಪ್ರದೇಶದ ವಿಧಾನ ಸಭಾ ಚುನಾವಣೆಗೂ ಮೊದಲು ಸ್ವಾಮಿ ಪ್ರಸಾದ್‌ ಮೌರ್ಯ ಬಿಜೆಪಿಯಿಂದ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT