ತಿರುಪತಿ ಲಾಡುನಲ್ಲಿ ಕಲಬೆರಕೆ ಆಗಿದೆ ಎಂಬ ವಿವಾದದ ಬೆನ್ನಲ್ಲೇ, ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ನಿಧಿ ಖರೆ ಅವರು, ‘ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ’ದಿಂದ (ಎಫ್‌ಎಸ್‌ಎಸ್‌ಎಐ) ವರದಿ ಪಡೆದ ನಂತರ ಮಾರುಕಟ್ಟೆಯಲ್ಲಿ ಲಭ್ಯವಿರುವ ತುಪ್ಪದ ಗುಣಮಟ್ಟ ಪರಿಶೀಲನೆಗೆ ಹೆಚ್ಚುವರಿ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.
ನರೇಂದ್ರ ಮೋದಿ 3.0 ಸರ್ಕಾರದ 100 ದಿನದ ಸಾಧನೆ ಬಗ್ಗೆ ತಿಳಿಸಲು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ಹಬ್ಬದ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮವಾಗಿ ತುಪ್ಪದ ಗುಣಮಟ್ಟ ಪರಿಶೀಲಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ, ‘ವರದಿ ಸ್ವೀಕರಿಸಿದ ನಂತರ ಅಗತ್ಯಬಿದ್ದರೆ ಮತ್ತಷ್ಟು ಕ್ರಮ ಕೈಗೊಳ್ಳುತ್ತೇವೆ’ ಎಂದು ಹೇಳಿದರು.