ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತಿರುಪತಿ ಲಾಡು ವಿವಾದ ಬೆನ್ನಲ್ಲೇ ಅಯೋಧ್ಯೆ ರಾಮಮಂದಿರದ ಪ್ರಸಾದ ಪರೀಕ್ಷೆ

Published : 28 ಸೆಪ್ಟೆಂಬರ್ 2024, 2:20 IST
Last Updated : 28 ಸೆಪ್ಟೆಂಬರ್ 2024, 2:20 IST
ಫಾಲೋ ಮಾಡಿ
Comments

ಅಯೋಧ್ಯೆ: ತಿರುಪತಿ ಲಾಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗಿದೆ ಎಂಬ ಆರೋಪದ ಬೆನ್ನಲ್ಲೇ, ಅಯೋಧ್ಯೆಯ ರಾಮಮಂದಿರ ದೇವಾಲಯದಲ್ಲಿ ವಿತರಿಸುವ ಪ್ರಸಾದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಆಹಾರ ಸುರಕ್ಷತೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಸಮಗ್ರ ದೂರು ಪರಿಹಾರ ವ್ಯವಸ್ಥೆಯಡಿ (ಐಜಿಆರ್‌ಎಸ್) ಮೂಲಕ ಸಲ್ಲಿಸಲಾದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆಹಾರ ಸುರಕ್ಷತೆ ಇಲಾಖೆ ಅಧಿಕಾರಿ ಮಾಣಿಕ್‌ ಚಂದ್ ಸಿಂಗ್‌ ಮಾಹಿತಿ ನೀಡಿದ್ದಾರೆ.

ರಾಮಮಂದಿರದಲ್ಲಿ ಪ್ರಸಾದ ರೂಪದಲ್ಲಿ ನೀಡಲಾಗುವ ಏಲಕ್ಕಿಯನ್ನು ಹೈದರ್‌ಗಂಜ್‌ನಲ್ಲಿ ಸಿದ್ಧಪಡಿಸಲಾಗುತ್ತದೆ. ಅಲ್ಲಿಯೇ ಪ್ರಸಾದ ಮಾದರಿಯನ್ನು ಸಂಗ್ರಹಿಸಿ, ಝಾನ್ಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರತಿದಿನ ಸುಮಾರು 80,000 ಏಲಕ್ಕಿ ಬೀಜಗಳನ್ನು ಪವಿತ್ರ ನೈವೇದ್ಯ ರೂಪದಲ್ಲಿ ಭಕ್ತರಿಗೆ ವಿತರಿಸಲಾಗುತ್ತದೆ ಎಂದು ರಾಮ ಮಂದಿರ ಟ್ರಸ್ಟ್‌ನ ಅಧಿಕಾರಿ ಪ್ರಕಾಶ್ ಗುಪ್ತಾ ತಿಳಿಸಿದ್ದಾರೆ.

ತಿರುಮಲ ತಿರುಪತಿ ದೇವಸ್ಥಾನದಲ್ಲಿ ಲಾಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಸೇರಿದೆ ಎಂಬ ವಿವಾದದ ನಡುವೆ ದೇಶದಾದ್ಯಂತ ಮಾರಾಟವಾಗುತ್ತಿರುವ ತುಪ್ಪದ ಶುದ್ಧತೆಯ ಬಗ್ಗೆ ಇತ್ತೀಚೆಗೆ ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್‌ ಪ್ರಶ್ನಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT