ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತಿರುಪತಿ ಲಾಡು: ವಿಎಚ್‌ಪಿ ಸಭೆಯಲ್ಲಿ ಚರ್ಚೆ

Published : 22 ಸೆಪ್ಟೆಂಬರ್ 2024, 14:48 IST
Last Updated : 22 ಸೆಪ್ಟೆಂಬರ್ 2024, 14:48 IST
ಫಾಲೋ ಮಾಡಿ
Comments

ನವದೆಹಲಿ: ವಿಶ್ವ ಹಿಂದೂ ಪರಿಷತ್ತಿನ (ವಿಎಚ್‌ಪಿ) ಕೇಂದ್ರೀಯ ಮಾರ್ಗದರ್ಶಕ ಮಂಡಳಿಯ ಸಭೆಯು ತಿರುಪತಿಯಲ್ಲಿ ಸೋಮವಾರ ನಡೆಯಲಿದ್ದು, ತಿರುಪತಿ ಲಾಡು ಕುರಿತ ವಿವಾದ ಹಾಗೂ ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸುವ ವಿಚಾರವು ಪ್ರಮುಖವಾಗಿ ಚರ್ಚೆಯಾಗಲಿದೆ.

ಮತಾಂತರದ ವಿಚಾರವಾಗಿಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ವಿಎಚ್‌ಪಿಯ ಹಿರಿಯ ಪದಾಧಿಕಾರಿಯೊಬ್ಬರು ತಿಳಿಸಿದರು. ಆಂಧ್ರಪ್ರದೇಶ, ತೆಲಂಗಾಣ ಮತ್ತು ದಕ್ಷಿಣ ಭಾರತದ ಇತರ ರಾಜ್ಯಗಳ ಹಿಂದೂ ಮಠಾಧೀಶರು, ಸಂತರು ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ವಿಎಚ್‌ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಜರಂಗ ಬಾಗಡಾ ಮತ್ತು ಇತರ ಹಿರಿಯ ಪದಾಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ‘ಹಿಂದೂ ಸಮಾಜದ ಮುಂದಿರುವ ಸವಾಲುಗಳು ಹಾಗೂ ಅವುಗಳನ್ನು ನಿವಾರಿಸುವ ಮಾರ್ಗೋಪಾಯಗಳ ಕುರಿತಾಗಿ ಸಭೆಯು ಚರ್ಚೆ ನಡೆಸಲಿದೆ’ ಎಂದು ಬಾಗಡಾ ತಿಳಿಸಿದರು.

ತಿರುಪತಿ ಲಾಡು ವಿಚಾರವಾಗಿ ಸಭೆಯು ನಿರ್ಣಯವೊಂದನ್ನು ಅಂಗೀಕರಿಸುವ ಸಾಧ್ಯತೆಯೂ ಇದೆ ಎಂದು ಬಾಗಡಾ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT