ಸಿ.ಎಂ ನೈತಿಕ ಹೊಣೆ ಹೊರಲಿ: ವೈಎಸ್‌ಆರ್‌ಸಿಪಿ
ಕಾಲ್ತುಳಿತ ಘಟನೆ ಕುರಿತು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ವಿರೋಧ ಪಕ್ಷ ವೈ.ಎಸ್.ಆರ್. ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ನೈತಿಕ ಹೊಣೆ ಹೊರಬೇಕು ಎಂದು ಆಗ್ರಹಿಸಿದೆ. ‘ಹೆಚ್ಚುವರಿ ಇ.ಒ ಎಸ್‌ಪಿ ಹಾಗೂ ಅಧೀನ ಅಧಿಕಾರಿಗಳು ಟಿಟಿಡಿಯ ಜಾಗೃತ ದಳದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಬೇಕು. ಮೃತರ ಕುಟುಂಬಗಳಿಗೆ ತಲಾ ₹ 1ಕೋಟಿ ಗಾಯಗೊಂಡವರಿಗೆ ತಲಾ ₹20 ಲಕ್ಷ ಪರಿಹಾರ ನೀಡಬೇಕು’ ಎಂದು ಟಿಟಿಡಿಯ ಮಾಜಿ ಅಧ್ಯಕ್ಷ ಹಾಗೂ ವೈಎಸ್‌ಆರ್‌ಸಿಯ ಹಿರಿಯ ನಾಯಕ ಬಿ.ಕರುಣಾಕರ ರೆಡ್ಡಿ ಆಗ್ರಹಿಸಿದ್ದಾರೆ.