ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಉಚ್ಚಾಟನೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಹುವಾ

Published 11 ಡಿಸೆಂಬರ್ 2023, 15:33 IST
Last Updated 11 ಡಿಸೆಂಬರ್ 2023, 15:33 IST
ಅಕ್ಷರ ಗಾತ್ರ

ನವದೆಹಲಿ: ತಮ್ಮನ್ನು ಲೋಕಸಭೆಯಿಂದ ಉಚ್ಚಾಟಿಸಿರುವುದನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ಅರ್ಜಿ ಸಲ್ಲಿಸಿದ್ದಾರೆ. 

ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಉದ್ಯಮಿ ದರ್ಶನ್‌ ಹೀರಾನಂದಾನಿ ಅವರಿಂದ ಮಹುವಾ ಹಣ ಪಡೆದಿದ್ದಾರೆ ಎಂದು ಸಂಸತ್ತಿನ ನೀತಿ ಸಮಿತಿಯು ನೀಡಿದ್ದ ವರದಿಯನ್ನು ಅಂಗೀಕರಿಸಿದ್ದ ಲೋಕಸಭೆಯು, ‘ಅನೈತಿಕ ನಡವಳಿಕೆ’ ಕಾರಣ ನೀಡಿ ಅವರನ್ನು ಡಿಸೆಂಬರ್‌ 8ರಂದು ಲೋಕಸಭಾ ಸದಸ್ಯತ್ವದಿಂದ ಉಚ್ಚಾಟಿಸಿದೆ.

ಹೀರಾನಂದಾನಿ ಅವರಿಗೆ ಅನುಕೂಲ ಮಾಡಿಕೊಡುವ ರೀತಿಯಲ್ಲಿ ಮಹುವಾ ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಿದ್ದಾರೆ. ತಮ್ಮ ಲೋಕಸಭಾ ಪೋರ್ಟಲ್‌ನ ಲಾಗಿನ್‌ ವಿವರಗಳನ್ನು ಅವರೊಂದಿಗೆ ಹಂಚಿಕೊಂಡಿದ್ದಾರೆ. ಅದಕ್ಕೆ ಪ್ರತಿಯಾಗಿ ಉಡುಗೊರೆಗಳನ್ನು ಮತ್ತು ಹಣವನ್ನು ಪಡೆದಿದ್ದಾರೆ ಎಂದು ಸಮಿತಿಯ ವರದಿಯಲ್ಲಿ ಹೇಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಈಗಾಗಲೇ ಎಫ್‌ಐಆರ್‌ ದಾಖಲಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT