ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪಶ್ಚಿಮ ಬಂಗಾಳ: ಟಿಎಂಸಿ ನಾಯಕನ ಮೇಲೆ ಗುಂಡಿನ ದಾಳಿ

Published 17 ಮೇ 2024, 7:40 IST
Last Updated 17 ಮೇ 2024, 7:40 IST
ಅಕ್ಷರ ಗಾತ್ರ

​ಕೂಚ್‌ ಬಿಹಾರ್: ಪಶ್ಚಿಮ ಬಂಗಾಳದ ಕೂಚ್‌ ಬಿಹಾರ್ ಜಿಲ್ಲೆಯಲ್ಲಿ ಸ್ಥಳೀಯ ಟಿಎಂಸಿ ಮುಖಂಡರೊಬ್ಬರ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಲಾಲ್‌ಬಜಾರ್‌ನ ಪಂಚಾಯತ್‌ನ ಅಧ್ಯಕ್ಷ ಅನಿಮೇಶ್ ರಾಯ್ ಅವರು ಗುರುವಾರ ರಾತ್ರಿ ಸಹಾಯಕರೊಂದಿಗೆ ಮನೆಗೆ ಹಿಂದಿರುಗುತ್ತಿದ್ದಾಗ ಅವರ ಮೇಲೆ ದಾಳಿ ನಡೆದಿದೆ ಎಂದು ವರದಿಯಾಗಿದೆ.

ಅಪರಿಚಿತ ಶಸ್ತ್ರಸಜ್ಜಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ. ರಾಯ್ ಅವರ ಬಲ ತೊಡೆಗೆ ಗಾಯವಾಗಿದೆ. ಅವರ ಸಹಾಯಕ ಕೂಡ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಆರೋಪಿಗಳ ಪತ್ತೆಗಾಗಿ ಶೋಧ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಯ್ ಅವರು ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದೆ ಎಂದೂ ಅಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT