ಪಿಟಿಐ

ಕೋಲ್ಕತ್ತ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವು ಆಗಸ್ಟ್ 15ರ ಒಳಗಾಗಿ ಮುರ್ಶಿದಾಬಾದ್ ಜಿಲ್ಲೆಯಲ್ಲಿ ಪಕ್ಷದ ನಾಯಕತ್ವವನ್ನು ಬದಲಾಯಿಸದಿದ್ದರೆ ನೂತನ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಟಿಎಂಸಿ ಶಾಸಕ ಹುಮಾಯೂನ್ ಕಬೀರ್ ಅವರು ಎಚ್ಚರಿಕೆ ನೀಡಿದ್ದಾರೆ.

ಪರ್ಯಾಯ ಮಾರ್ಗದಲ್ಲಿ ಸಾಗುವಂತೆ ಕೆಲವು ಮುಸ್ಲಿಂ ಮತ್ತು ಹಿಂದೂಗಳು ಒತ್ತಾಯಿಸುತ್ತಿದ್ದಾರೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

‘ಹೊಸ ಪಕ್ಷವನ್ನು 2026ರ ಜನವರಿ 1ರಂದು ಅಧಿಕೃತವಾಗಿ ಘೋಷಣೆ ಮಾಡಲಾಗುವುದು. ಪಕ್ಷದಿಂದ 50ರಿಂದ 52 ಅಭ್ಯರ್ಥಿಗಳು ಬಂಗಾಳದ ವಿವಿಧೆಡೆ ಸ್ಪರ್ಧಿಸಲಿದ್ದಾರೆ’ ಎಂದು ಅವರು ಮಾಹಿತಿ ನೀಡಿದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಟಿಎಂಸಿ, ‘ಪಕ್ಷದ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಕಬೀರ್ ಅವರಿಗೆ ಈಗಾಗಲೇ ಹಲವು ಬಾರಿ ನೋಟಿಸ್ ನೀಡಲಾಗಿದೆ. ಅವರು ಪಕ್ಷವನ್ನು ತ್ಯಜಿಸಲು ಇಚ್ಛಿಸಿದಲ್ಲಿ ಯಾವುದೇ ಸಮಯದಲ್ಲಿ ತೊರೆಯಬಹುದು’ ಎಂದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.