ಕೋಲ್ಕತ್ತ: ಶಾಸಕರಾದ ಸಂದೀಪನ್ ಸಹಾ ಮತ್ತು ರಿತಬ್ರತಾ ಬ್ಯಾನರ್ಜಿ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸೋಮವಾರ ಉಚ್ಛಾಟಿಸಿದೆ.

ರಾಜ್ಯ ವಿಧಾನಸಭೆಯಲ್ಲಿ ನಡೆದ 'ನಕಲಿ ಸಹಿ' ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿಯ ಇಬ್ಬರು ಶಾಸಕರು ದೂರು ದಾಖಲಿಸಿದ್ದಾರೆ ಎಂದು ಮುಖ್ಯಮಂತ್ರಿ ಸುವೇಂದು ಅಧಿಕಾರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ ಕೆಲವೇ ನಿಮಿಷಗಳಲ್ಲಿ ಈ ಉಚ್ಚಾಟನೆ ಆದೇಶ ಹೊರಬಿದ್ದಿದೆ.

‘ನೀವು ಪಕ್ಷದ ಅಧಿಕೃತ ನಾಯಕತ್ವವು ಕರೆದ ಸಭೆಗಳಿಗೆ ಪದೇ ಪದೇ ಗೈರುಹಾಜರಾಗಿದ್ದೀರಿ ಮತ್ತು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದೀರಿ ಎಂಬುದು ಸಕ್ಷಮ ಪ್ರಾಧಿಕಾರದ ಮೂಲಕ ಎಐಟಿಸಿ(ಅಖಿಲ ಭಾರತ ತೃಣಮೂಲ ಕಾಂಗ್ರೆಸ್) ಗಮನಕ್ಕೆ ಬಂದಿದೆ’ ಎಂದು ಪಕ್ಷದ ಉಪಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ಸಹಿ ಮಾಡಿರುವ ಪತ್ರದಲ್ಲಿ ತಿಳಿಸಲಾಗಿದೆ.

‘ನೀವು ಪಕ್ಷದ ಹಿತಾಸಕ್ತಿಗಳಿಗೆ ಧಕ್ಕೆ ತರುವಂತಹ ಚಟುವಟಿಕೆಗಳಲ್ಲಿ ತೊಡಗಿದ್ದೀರಿ ಮತ್ತು ಹೇಳಿಕೆಗಳನ್ನು ನೀಡಿದ್ದೀರಿ ಎಂಬುದು ಕೂಡ ಗಮನಕ್ಕೆ ಬಂದಿದೆ’ ಎಂದು ತಿಳಿಸಿದ್ದಾರೆ.

ಈ ವಿಷಯವನ್ನು ಸೂಕ್ತವಾಗಿ ಪರಿಶೀಲಿಸಿದ ನಂತರ, ಎಐಟಿಸಿಯ ಸಕ್ಷಮ ಪ್ರಾಧಿಕಾರವು ನಿಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲು ನಿರ್ಧರಿಸಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

‘ಆದ್ದರಿಂದ, ಈ ನೋಟಿಸ್ ಜಾರಿಯಾದ ದಿನಾಂಕದಿಂದ ನೀವು ಪಕ್ಷಕ್ಕೆ ಸಂಬಂಧಿಸಿದ ಯಾವುದೇ ಹುದ್ದೆ, ಜವಾಬ್ದಾರಿ ಅಥವಾ ಸವಲತ್ತುಗಳನ್ನು ಹೊಂದುವುದನ್ನು ನಿಲ್ಲಿಸುತ್ತೀರಿ’ ಎಂದು ಹೇಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.