ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಿಕ್ಷಕರ ನೇಮಕಾತಿ ಹಗರಣ: ಇ.ಡಿ ವಿಚಾರಣೆಗೆ ಹಾಜರಾದ ಅಭಿಷೇಕ್ ಬ್ಯಾನರ್ಜಿ

Published : 9 ನವೆಂಬರ್ 2023, 7:08 IST
Last Updated : 9 ನವೆಂಬರ್ 2023, 7:08 IST
ಫಾಲೋ ಮಾಡಿ
Comments

ಕೋಲ್ಕತ್ತ: ಶಿಕ್ಷಕರ ನೇಮಕಾತಿ ಹಗರಣ ಸಂಬಂಧ ತೃಣಮೂಲ ಕಾಂಗ್ರೆಸ್‌ ಸಂಸದ ಅಭಿಷೇಕ್ ಬ್ಯಾನರ್ಜಿ ಅವರು ಇಂದು (ಗುರುವಾರ) ಬೆಳಿಗ್ಗೆ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾದರು.

ಬೆಳಿಗ್ಗೆ ಸುಮಾರು 11.10ರ ವೇಳೆಗೆ ಇಲ್ಲಿನ ಜಾರಿ ನಿರ್ದೇಶನಾಲಯದ ಕಚೇರಿಗೆ ಅವರು ಆಗಮಿಸಿದರು.

ಇಲ್ಲಿನ ಸಾಲ್ಟ್‌ ಲೇಕ್ ಪ್ರದೇಶದಲ್ಲಿ ಇ.ಡಿ ಕಚೇರಿ ಇದ್ದು, ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಇದೇ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಬೇಕು ಎಂದು ಅಕ್ಟೋಬರ್‌ 3ರಂದು ಅವರಿಗೆ ಸಮನ್ಸ್‌ ನೀಡಲಾಗಿತ್ತು. ಆದರೆ ನರೇಗಾ ಯೋಜನೆಯಡಿ ಕೇಂದ್ರ ಸರ್ಕಾರವು ರಾಜ್ಯಕ್ಕೆ ಶೀಘ್ರವೇ ಅನುದಾನ ಬಿಡುಗಡೆ ಮಾಡಬೇಕು ಎಂದು ದೆಹಲಿಯಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರಿಂದ ವಿಚಾರಣೆಗೆ ಗೈರಾಗಿದ್ದರು.

ಇದೇ ಪ್ರಕರಣ ಸಂಬಂಧ ಸೆ. 13 ಅಭಿಷೇಕ್ ಬ್ಯಾನರ್ಜಿ ಅವರನ್ನು ಸುಮಾರು 9 ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು.

ಕಲ್ಲಿದ್ದಲು ಹಗರಣ ಸಂಬಂಧ 2021ರಲ್ಲಿ ದೆಹಲಿಯಲ್ಲೂ, 2022ರಲ್ಲಿ ಕೋಲ್ಕತ್ತದಲ್ಲಿಯೂ ಅಭಿಷೇಕ್ ಇ.ಡಿ ವಿಚಾರಣೆ ಎದುರಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT