ನವದೆಹಲಿ: ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಲೋಕಸಭೆಯಲ್ಲಿ ಬೆದರಿಕೆ ಹಾಕಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಆರೋಪಿಸಿದ್ದಾರೆ. ಅಲ್ಲದೆ ಈ ಬಗ್ಗೆ ಆಂತರಿಕ ಸಂಸದೀಯ ಒಕ್ಕೂಟಕ್ಕೆ ಪತ್ರ ಬರೆದಿದ್ದಾಗಿ ಹೇಳಿದ್ದಾರೆ.
.ಸೆಬಿ ಅಧ್ಯಕ್ಷೆ ಮಾಧವಿ ವಿರುದ್ಧ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ದೂರು.
‘ಕಿರಣ್ ರಿಜಿಜು ಲೋಕಸಭೆಯಲ್ಲಿ ನನಗೆ ಬಹಿರಂಗವಾಗಿ ಬೆದರಿಕೆ ಹಾಕಿದ್ದಾರೆ. ಇದು ಸಂಸದೀಯ ನಿಯಮ ಹಾಗೂ ನಡವಳಿಯ ಸಂಪೂರ್ಣ ಉಲ್ಲಂಘನೆ’ ಎಂದು ಅವರು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.

‘ರಿಜಿಜು ಅವರ ಮಾತನ್ನು ಕಡತದಿಂದ ತೆಗೆದು ಹಾಕುವುದಾಗಿ ಹೇಳಿದ್ದಾರೆ. ಆದರೆ ಈವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಈ ಲಿಂಗ ತಾರತಮ್ಯ ಹಾಗೂ ಬೆದರಿಕೆಯ ವಿರುದ್ಧ ಆಂತರಿಕ ಸಂಸದೀಯ ಒಕ್ಕೂಟಕ್ಕೆ ಪತ್ರ ಬರೆದಿದ್ದೇನೆ’ ಎಂದು ಹೇಳಿದ್ದಾರೆ.
.ಮಹಿಳಾ ಆಯೋಗದ ಅಧ್ಯಕ್ಷರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಮಹುವಾ ವಿರುದ್ಧ ಪ್ರಕರಣ.
ಸಂವಿಧಾನದ ಬಗ್ಗೆ ಚರ್ಚೆಯ ವೇಳೆ ನ್ಯಾಯಮೂರ್ತಿ ಲೋಯಾ ಪ್ರಕರಣವನ್ನು ಮಹುವಾ ಉಲ್ಲೇಖಿಸಿದ್ದರು. ಇದು ಲೋಕಸಭೆಯಲ್ಲಿ ಗದ್ದಲಕ್ಕೆ ಕಾರಣವಾಗಿತ್ತು. ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿ ತೀರ್ಮಾನವಾಗಿದ್ದು, ನಿಮ್ಮ ವಿರುದ್ಧ ಸಂಸದೀಯ ಕ್ರಮಗಳನ್ನು ತೆಗೆದುಕೊಳ್ಳಬೇಕಾದಿತು ಎಂದು ರಿಜಿಜು ಎಚ್ಚರಿಕೆ ನೀಡಿದ್ದರು.

ತಮ್ಮ ಭಾಷಣದುದ್ದಕ್ಕೂ ಕೇಂದ್ರ ಸರ್ಕಾರದ ವಿರುದ್ಧ ಮಹುವಾ ವಾಗ್ದಾಳಿ ನಡೆಸಿದ್ದರು. ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ವಿರುದ್ಧ ಧ್ವನಿ ಎತ್ತಿದ್ದರು. ಅವುಗಳನ್ನು ದುರುಪಯೋಗಪಡಿಸಿಕೊಂಡು ವಿರೋಧ ಪಕ್ಷಗಳ ನಾಯಕರನ್ನು ಹಣಿಯಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
.ಕಾನೂನುಬಾಹಿರ ನಡೆ ಮೂಲಕ ಚುನಾವಣಾ ಪ್ರಚಾರಕ್ಕೆ ಅಡ್ಡಿ: CBI ವಿರುದ್ಧ ಮಹುವಾ ದೂರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.