ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ದಾಳಿಗೆ ಪ್ರತೀಕಾರವಾಗಿ ನಡೆಸಿದ ‘ಆಪರೇಷನ್ ಸಿಂಧೂರ‘ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಜನರಿಗೆ ತಿಳಿಸುವ ಪ್ರಯತ್ನದ ಭಾಗವಾಗಿ ಸಂಸತ್ತಿನ ವಿಶೇಷ ಅಧಿವೇಶನ ನಡೆಸುವಂತೆ ಒತ್ತಾಯಿಸಿ ತೃಣಮೂಲ ಕಾಂಗ್ರೆಸ್ ಸಂಸದರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಲೋಕಸಭೆ ಮತ್ತು ರಾಜ್ಯಸಭೆಯ ಟಿಎಂಸಿ ಸದಸ್ಯರು ಹಳೆಯ ಸಂಸತ್ತು ಕಟ್ಟಡದ ಸಭಾಂಗಣದಲ್ಲಿ ಸಭೆ ನಡೆಸಿದರು.

ಸಭೆ ಬಳಿಕ ಮಾತನಾಡಿದ ರಾಜ್ಯಸಭೆಯ ಪಕ್ಷದ ಉಪನಾಯಕಿ ಸಾಗರಿಕಾ ಘೋಷ್, ‘ಆಪರೇಷನ್ ಸಿಂಧೂರ’ದ ನಂತರ ರಾಜತಾಂತ್ರಿಕ ಕಾರ್ಯಾಚರಣೆಯ ಭಾಗವಾಗಿ ವಿದೇಶಗಳಿಗೆ ಕಳುಹಿಸಿರುವ ಸರ್ವ ಪಕ್ಷಗಳ ನಿಯೋಗಗಳು ಜೂನ್ 5ರಂದು ತಮ್ಮ ಪ್ರವಾಸಗಳಿಂದ ವಾಪಸ್ ಆದ ಬಳಿಕ ಸಂಸತ್ತಿನ ವಿಶೇಷ ಅಧಿವೇಶನ ನಡೆಸಬೇಕೆಂದು ಕೋರಿ ಪ್ರಧಾನಿಗೆ ಬರೆದ ಪತ್ರಕ್ಕೆ ಸಹಿ ಹಾಕಿದ್ದೇವೆ ಎಂದು ಹೇಳಿದ್ದಾರೆ.
.ಸಾವರ್ಕರ್ ಬರೆದ ದೇಶಭಕ್ತಿ ಗೀತೆಗೆ ಮಹಾರಾಷ್ಟ್ರ ಸರ್ಕಾರದ ಪ್ರೇರಣಾ ಗೀತೆ ಪುರಸ್ಕಾರ.PHOTOS | ಮುಂಬೈಯಲ್ಲಿ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ.
'ಆಪರೇಷನ್ ಸಿಂಧೂರ' ಕಾರ್ಯಾಚರಣೆಗೆ ಸಂಬಂಧಿಸಿದಂತೆ ಜನರಿಗೆ ತಿಳಿಸುವ ಪ್ರಯತ್ನದ ಭಾಗವಾಗಿ ಸಂಸತ್ತಿನ ವಿಶೇಷ ಅಧಿವೇಶನ ನಡೆಸುವಂತೆ ಇತ್ತೀಚೆಗೆ ನಡೆದ ಸರ್ವಪಕ್ಷ ಸಭೆಯಲ್ಲಿಯೂ ಈ ಬೇಡಿಕೆಯನ್ನು ಇಡಲಾಗಿತ್ತು ಎಂದು ಘೋಷ್ ತಿಳಿಸಿದ್ದಾರೆ.

ಭಯೋತ್ಪಾದನೆಯ ವಿರುದ್ಧ ಭಾರತದ ಸಂದೇಶವನ್ನು ರವಾನಿಸಲು ವಿದೇಶಗಳಿಗೆ ಕಳುಹಿಸಲಾದ ಬಹುಪಕ್ಷೀಯ ನಿಯೋಗಗಳನ್ನು ಟಿಎಂಸಿ ಬೆಂಬಲಿಸಿದೆ. ಆದರೆ ದೇಶದ ಜನರು ಸಹ ಸರ್ಕಾರದ ಕ್ರಮಗಳ ಬಗ್ಗೆ ತಿಳಿದುಕೊಳ್ಳಲು ಅರ್ಹರು ಎಂದು ಪಕ್ಷ ತಿಳಿಸಿದೆ.
.ಡಾಲರ್ ಎದುರು 27 ಪೈಸೆ ಕುಸಿದು 85.37ಕ್ಕೆ ತಲುಪಿದ ಭಾರತದ ರೂಪಾಯಿ ಮೌಲ್ಯ.ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಭಾರತದ ಪರ ನಾವಿದ್ದೇವೆ: ಸಿಂಗಪುರ.
ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ 'ಆಪರೇಷನ್ ಸಿಂಧೂರ' ನಡೆಸುವ ಮೂಲಕ ತಕ್ಕ ಉತ್ತರ ನೀಡಿತ್ತು.

ಭಾರತವು ಪಾಕಿಸ್ತಾನದ ವಿವಿಧ ನಗರಗಳನ್ನು ಗುರಿಯಾಗಿಸಿ ದಾಳಿ ನಡೆಸುವ ಮೂಲಕ ಪಾಕ್ಗೆ ತಿರುಗೇಟು ನೀಡಿತ್ತು. ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಪಂಜಾಬ್, ಗುಜರಾತ್. ರಾಜಸ್ಥಾನ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನದಿಂದ ನಡೆದ ದಾಳಿಗೂ ಭಾರತೀಯ ಸೇನೆ ದಿಟ್ಟ ಪ್ರತಿರೋಧ ಒಡ್ಡಿತ್ತು.
.ದೇಶದ ನಿಲುವನ್ನು ವಿಪಕ್ಷ ಪರಿಣಾಮಕಾರಿಯಾಗಿ ತಿಳಿಸುತ್ತಿದೆ; ಕಾಂಗ್ರೆಸ್.ಮುಂಬೈಯಲ್ಲಿ 24 ಗಂಟೆಗಳಲ್ಲಿ 106 ಮಿ.ಮೀ ಮಳೆ: ಮತ್ತೆ ಮಳೆ ಮುನ್ಸೂಚನೆ ನೀಡಿದ IMD.ಅಂತರರಾಷ್ಟ್ರೀಯ ಗಡಿಯಲ್ಲಿ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಮುಂದುವರಿದಿದೆ: BSF.ಛತ್ತೀಸಗಢ: ಭದ್ರತಾ ಸಿಬ್ಬಂದಿ ಮುಂದೆ ಶರಣಾದ 18 ನಕ್ಸಲರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.