ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ | ಟಿಎಂಸಿ ದೇಶ ವಿರೋಧಿ ಶಕ್ತಿಗಳಿಗೆ ಆಶ್ರಯ ನೀಡುತ್ತಿದೆ: ಠಾಕೂರ್‌

Published 15 ಏಪ್ರಿಲ್ 2024, 10:34 IST
Last Updated 15 ಏಪ್ರಿಲ್ 2024, 10:34 IST
ಅಕ್ಷರ ಗಾತ್ರ

ಸಿಲಿಗುರಿ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ ಪಕ್ಷವು (ಟಿಎಂಸಿ) ದೇಶ ವಿರೋಧಿ ಶಕ್ತಿಗಳಿಗೆ ಆಶ್ರಯ ನೀಡುತ್ತಿದೆ ಹಾಗೂ ಮಹಿಳೆಯರ ಮೇಲೆ ದೌರ್ಜನ್ಯ ಎಸಗುವವರನ್ನು ಬೆಂಬಲಿಸುತ್ತಿದೆ ಎಂದು ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್‌ ಠಾಕೂರ್‌ ಆರೋಪಿಸಿದ್ದಾರೆ.

ಸಿಲಿಗುರಿಯಲ್ಲಿ ಆಯೋಜಿಸಲಾಗಿದ್ದ ಚುನಾವಣಾ ಪ್ರಚಾರದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಅಥವಾ ದೇಶದ ಇತರೆಡೆ ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿರುವ ಭಯೋತ್ಪಾದಕರು ಪಶ್ಚಿಮ ಬಂಗಾಳದಲ್ಲಿ ರಕ್ಷಣೆ ಮತ್ತು ಆಶ್ರಯವನ್ನು ಪಡೆಯುತ್ತಾರೆ ಏಕೆ’ ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಮಾಸ್ಟರ್‌ ಮೈಂಡ್‌ ಸೇರಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶುಕ್ರವಾರ (ಏಪ್ರಿಲ್‌ 12) ಪಶ್ಚಿಮ ಬಂಗಾಳದಲ್ಲಿ ಬಂಧಿಸಿತ್ತು. ಈ ಬೆಳವಣಿಗೆಯು ಬಿಜೆಪಿ ಮತ್ತು ರಾಜ್ಯದ ಆಡಳಿತಾರೂಢ ಟಿಎಂಸಿ ನಡುವೆ ಮಾತಿನ ಸಮರಕ್ಕೆ ಕಾರಣವಾಗಿದೆ.

‘ಟಿಎಂಸಿ ಪಶ್ಚಿಮ ಬಂಗಾಳವನ್ನು ಭಯೋತ್ಪಾದಕರಿಗೆ ಸುರಕ್ಷಿತ ಸ್ವರ್ಗವನ್ನಾಗಿ ಮಾಡಿದೆ ಎಂದು ಬಿಜೆಪಿ ಆರೋಪಿಸಿತ್ತು. ಇದಕ್ಕೆ ಉತ್ತರಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯ ಪೊಲೀಸರ ತ್ವರಿತ ಕ್ರಮದಿಂದಾಗಿ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ತಿರುಗೇಟು ನೀಡಿದ್ದಾರೆ.

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಂದೇಶ್‌ಖಾಲಿಯಲ್ಲಿನ ಸುಲಿಗೆ, ಭೂಕಬಳಿಕೆ ಮತ್ತು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಗಳನ್ನು ಉಲ್ಲೇಖಿಸಿದ ಠಾಕೂರ್‌, ಮಮತಾ ಬ್ಯಾನರ್ಜಿ ಅವರ ಆಡಳಿತದಲ್ಲಿ ಭ್ರಷ್ಟಾಚಾರ ಅಭಿವೃದ್ಧಿ ಹೊಂದುತ್ತಿದೆ. ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಠಾಕೂರ್‌ ಅವರ ಆರೋಪಗಳಿಗೆ ತಿರುಗೇಟು ನೀಡಿರುವ ಪಶ್ಚಿಮ ಬಂಗಾಳದ ಸಚಿವೆ, ಟಿಎಂಸಿ ವಕ್ತಾರೆ ಶಶಿ ಪಂಜಾ, ಅನುರಾಗ್‌ ಠಾಕೂರ್‌ ಭ್ರಮೆಯಿಂದ ಬಳಲುತ್ತಿದ್ದಾರೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT