ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಒಬಿಸಿಯ ಹಕ್ಕುಗಳನ್ನು ಕಸಿದುಕೊಳ್ಳುತ್ತಿರುವ ಟಿಎಂಸಿ: ಪ್ರಧಾನಿ ಮೋದಿ

Published 28 ಮೇ 2024, 12:41 IST
Last Updated 28 ಮೇ 2024, 12:41 IST
ಅಕ್ಷರ ಗಾತ್ರ

ಬರಾಸತ್(ಪಶ್ಚಿಮ ಬಂಗಾಳ): ರಾಜ್ಯದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರವು ಓಲೈಕೆ ರಾಜಕಾರಣದಲ್ಲಿ (ವೋಟ್ ಜಿಹಾದ್) ನಿರತವಾಗಿದೆ. ಈ ಮೂಲಕ ಒಬಿಸಿ ಯುವಜನತೆಯ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರೋಪಿಸಿದ್ದಾರೆ.

ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಲ್ಕತ್ತ ನ್ಯಾಯಾಲಯದ ತೀರ್ಪುನ್ನು ನಾನು ಒಪ್ಪಿಕೊಳ್ಳುವುದಿಲ್ಲ ಎಂಬ ಮಮತಾ ಬ್ಯಾನರ್ಜಿ ಹೇಳಿಕೆಗೆ ಪ್ರತಿಕ್ರಿಯಿಸಿದರು. ನ್ಯಾಯಾಂಗ ಹಾಗೂ ಸಂವಿಧಾನದ ಮೇಲೆ ಅವರಿಗೆ ಗೌರವವಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಟಿಎಂಸಿ ಪಕ್ಷವು ನ್ಯಾಯಾಲಯವನ್ನು ಹೇಗೆ ಪ್ರಶ್ನಿಸುತ್ತಿದೆ. ಇದನ್ನು ನೋಡಿ ನನಗೆ ಆಶ್ಚರ್ಯವಾಗಿದೆ. ಈ ಪಕ್ಷವು ಸುಳ್ಳುಗಳನ್ನು ಮರೆಮಾಚಿಕೊಂಡು ಜನರ ನಂಬಿಕೆಯನ್ನು ಘಾಸಿಗೊಳಿಸಿದೆ. ಇದೀಗ ಟಿಎಂಸಿ ಸರ್ಕಾರ ಮಾಡಿರುವ ಅನ್ಯಾಯದ ಕ್ರಮಗಳು ಬಹಿರಂಗವಾಗಿವೆ ಎಂದು ಮೋದಿ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಹಲವು ವರ್ಗಗಳಿಗೆ ನೀಡಲಾಗಿದ್ದ ಇತರ ಹಿಂದುಳಿದ ವರ್ಗಗಳ (ಒಬಿಸಿ) ಸ್ಥಾನಮಾನವನ್ನು ಕಲ್ಕತ್ತ ಹೈಕೋರ್ಟ್‌ ಬುಧವಾರ ರದ್ದುಗೊಳಿಸಿದೆ. ರಾಜ್ಯದಲ್ಲಿನ ಸೇವಾ ಮತ್ತು ಹುದ್ದೆಗಳ ಭರ್ತಿ ಸಂಬಂಧ ರಾಜ್ಯ ಸರ್ಕಾರ 2012ರಲ್ಲಿ ಕಾಯ್ದೆ ರೂಪಿಸಿ ಹಲವು ವರ್ಗಗಳನ್ನು ಒಬಿಸಿ ವ್ಯಾಪ್ತಿಗೆ ತಂದು ಮೀಸಲಾತಿ ಜಾರಿಗೊಳಿಸಿತ್ತು. ಅದನ್ನು ಹೈಕೋರ್ಟ್‌ ಕಾನೂನುಬಾಹಿರ ಎಂದು ಹೇಳಿದೆ.

‘ಈ ತೀರ್ಪನ್ನು ತಾನು ಒಪ್ಪಿಕೊಳ್ಳುವುದಿಲ್ಲ. ಇದು ಬಿಜೆಪಿ ಪ್ರಭಾವದಿಂದ ನೀಡಲಾದ ತೀರ್ಪು’ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT