ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲ್ಕತ್ತ: ಬಾಂಬ್‌ ಸ್ಫೋಟ–ಟಿಎಂಸಿ ಕಾರ್ಯಕರ್ತ ಸಾವು

Published 12 ಮೇ 2024, 18:16 IST
Last Updated 12 ಮೇ 2024, 18:16 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳದ ಪೂರ್ವ ಬರ್ಧಮಾನ್ ಜಿಲ್ಲೆ ಕೇತುಗ್ರಾಮ ಎಂಬಲ್ಲಿ ಭಾನುವಾರ ಸಂಭವಿಸಿದ ಬಾಂಬ್‌ ಸ್ಫೋಟದಲ್ಲಿ ಆಡಳಿತಾರೂಢ ಟಿಎಂಸಿಯ ಒಬ್ಬ ಕಾರ್ಯಕರ್ತ ಮೃತಪಟ್ಟಿದ್ದಾರೆ.

ಮಿಂಟು ಶೇಖ್‌ ಮೃತ ಕಾರ್ಯಕರ್ತ. ರಾಜ್ಯದ ಎಂಟು ಲೋಕಸಭಾ ಕ್ಷೇತ್ರಗಳಿಗೆ ಸೋಮವಾರ ಮತದಾನ ನಡೆಯಲಿದ್ದು, ಮುನ್ನಾದಿನ ಈ ಅವಘಡ ಸಂಭವಿಸಿದೆ.

‘ಮಿಂಟು ಶೇಖ್‌ ಬೈಕ್‌ನಲ್ಲಿ ಮನೆಗೆ ಮರಳುತ್ತಿದ್ದಾಗ ಅವರನ್ನೇ ಗುರಿಯಾಗಿಸಿ ಕೆಲ ಕಿಡಿಗೇಡಿಗಳು ಬಾಂಬ್‌ ಎಸೆದಿದ್ದಾರೆ. ಸ್ಫೋಟದಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರಗೆ ಕರೆದೊಯ್ಯಲಾಯಿತು. ಮಿಂಟು ಮೃತಪಟ್ಟಿದ್ಧಾಗಿ ವೈದ್ಯರು ಘೋಷಿಸಿದರು’ ಎಂದು ಪೊಲೀಸರು ತಿಳಿಸಿದ್ದಾರೆ.

ಮಿಂಟು ಮೇಲೆ ಸಿಪಿಎಂ ಕಾರ್ಯಕರ್ತರೇ ದಾಳಿ ನಡೆಸಿದ್ದಾರೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT