ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಇಂಡಿಯಾ’ ಸಭೆ ದಿನವೇ ಇ.ಡಿಯಿಂದ ನೋಟಿಸ್‌: ಅಭಿಷೇಕ್ ಬ್ಯಾನರ್ಜಿ ಕಿಡಿ

Published 11 ಸೆಪ್ಟೆಂಬರ್ 2023, 5:13 IST
Last Updated 11 ಸೆಪ್ಟೆಂಬರ್ 2023, 5:13 IST
ಅಕ್ಷರ ಗಾತ್ರ

ಕೋಲ್ಕತ್ತ: ವಿಪಕ್ಷಗಳ ‘ಇಂಡಿಯಾ’ ಒಕ್ಕೂಟದ ಸಮನ್ವಯ ಸಮಿತಿ ಸಭೆಯ ದಿನವೇ ವಿಚಾರಣೆಗೆ ಹಾಜರಾಗಲು ನೋಟಿಸ್‌ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯದ (ಇಡಿ) ವಿರುದ್ಧ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಪ್ರಧಾನ ಕಾರ್ಯದರ್ಶಿಅಭಿಷೇಕ್‌ ಬ್ಯಾನರ್ಜಿ ಕಿಡಿ ಕಾರಿದ್ದಾರೆ.

‘56-ಇಂಚಿನ ಎದೆಯ ಅಂಜುಬುರುಕತೆ ಮತ್ತು ನಿರ್ವಾತತೆಯನ್ನು ನೋಡಿ ಆಶ್ಚರ್ಯಪಡದೆ ಇರಲು ಸಾಧ್ಯವಿಲ್ಲ’ ಎಂದು ಅವರು ಪ್ರಧಾನಿ ಮೋದಿ ವಿರುದ್ಧ ಪರೋಕ್ಷವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ‘ಎಕ್ಸ್‌’ನಲ್ಲಿ ಬರೆದುಕೊಂಡಿರುವ ಅವರು, ‘ಸೆ. 13ರಂದು ಇಂಡಿಯಾ ಮೈತ್ರಿಕೂಟದ ಸಮನ್ವಯ ಸಮಿತಿಯ ಸಭೆ ನಡೆಯಲಿದೆ. ನಾನು ಕೂಡ ಸದಸ್ಯ. ಆದರೆ ಅದೇ ದಿನ ವಿಚಾರಣೆಗೆ ಹಾಜರಾಗುವಂತೆ ಇ.ಡಿ ನೋಟಿಸ್ ನೀಡಿದೆ. 56-ಇಂಚಿನ ಎದೆಯ ಅಂಜುಬುರುಕತೆ ಮತ್ತು ನಿರ್ವಾತತೆಯನ್ನು ನೋಡಿ ಆಶ್ಚರ್ಯಪಡದೆ ಇರಲು ಸಾಧ್ಯವಿಲ್ಲ’ ಎಂದು ಬರೆದುಕೊಂಡಿದ್ದಾರೆ.

‘ಇಂಡಿಯಾ’ ಮೈತ್ರಿಕೂಟದ 14 ಮಂದಿಯ ಸಮನ್ವಯ ಸಮಿತಿಯ ಮೊದಲ ಸಭೆಯ ಸೆ.13 ರಂದು ದೆಹಲಿಯಲ್ಲಿ ನಡೆಯಲಿದೆ.

ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಅವರ ದೆಹಲಿ ನಿವಾಸದಲ್ಲಿ ಸಭೆ ನಡೆಯಲಿದ್ದು, ಮೈತ್ರಿ ಕಾರ್ಯತಂತ್ರಗಳು ಮತ್ತು ಭವಿಷ್ಯದ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ.

ಜಾನುವಾರು ಕಳ್ಳಸಾಗಣೆ ಪ್ರಕರಣದಲ್ಲಿ ಈಗಾಗಲೇ ಹಲವು ಬಾರಿ ಅಭಿಷೇಕ್‌ ಅವರಿಗೆ ಇ.ಡಿ ನೋಟಿಸ್‌ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT