ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಐಎಡಿಎಂಕೆ ಮೈತ್ರಿ ಅಂತ್ಯದ ಬಗ್ಗೆ ಬಿಜೆಪಿ ಕೋರ್‌ ಕಮಿಟಿಯಲ್ಲಿ ಶೀಘ್ರ ಚರ್ಚೆ

Published 28 ಸೆಪ್ಟೆಂಬರ್ 2023, 15:19 IST
Last Updated 28 ಸೆಪ್ಟೆಂಬರ್ 2023, 15:19 IST
ಅಕ್ಷರ ಗಾತ್ರ

ಚೆನ್ನೈ :  ತಮಿಳುನಾಡಿನಲ್ಲಿ ಐಎಎಡಿಎಂಕೆ ಮೈತ್ರಿ ಹೊರನಡೆದ ಬಗ್ಗೆ ಬಿಜೆಪಿಯು ಶೀಘ್ರದಲ್ಲೇ ತನ್ನ ಕೋರ್ ಕಮಿಟಿ ಮತ್ತು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚೆ ನಡೆಸಲಿದೆ. ಜತೆಗೆ, ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಸಮಾಲೋಚನೆ ನಡೆಸಲಿದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಗುರುವಾರ ತಿಳಿಸಿದ್ದಾರೆ.

ಬಿಜೆಪಿ ನೇತೃತ್ವದ ಎನ್‌ಡಿಎಯಿಂದ ಹೊರಗುಳಿಯುವ ಎಐಡಿಎಂಕೆಯ ನಿರ್ಧಾರವನ್ನು ದುರದೃಷ್ಟಕರ ಎಂದು ಹೇಳಿರುವ ತಮಿಳುನಾಡು ಸಹ ಉಸ್ತುವಾರಿ ಪೊಂಗುಲೇಟಿ ಸುಧಾಕರ ರೆಡ್ಡಿ, ಶೀಘ್ರದಲ್ಲೇ ಪಕ್ಷದ ರಾಜ್ಯ ಕೋರ್ ಕಮಿಟಿ ಮತ್ತು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಗುವುದು ಎಂದು ಹೇಳಿದರು. 

‘ಮೈತ್ರಿಯ ಬಗ್ಗೆ ನಾನು ಅಧಿಕೃತವಾಗಿ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಕೇಂದ್ರ ನಾಯಕತ್ವವು ತಮಿಳುನಾಡಿನ ಬೆಳವಣಿಗೆಯನ್ನು ಗಮನಿಸುತ್ತಿದೆ. ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ‘ ಎಂದು ಅವರು ತಿಳಿಸಿದರು.

ಎಐಎಡಿಎಂಕೆ ಮೈತ್ರಿ ಮುರಿದುಕೊಂಡ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ ಹೈಕಮಾಂಡ್‌ ವರದಿ ಕೇಳಿದೆಯೇ ಎಂಬ ಪ್ರಶ್ನೆಗೆ ಅವರು ಉತ್ತರಿಸಲು ನಿರಾಕರಿಸಿದರು.

ಎಐಎಡಿಎಂಕೆ ಜತೆ ಸಂಪರ್ಕದಲ್ಲಿದ್ದ ಹಿರಿಯ ನಾಯಕರಿಂದ ಮಾತ್ರ ವಸ್ತು ಸ್ಥಿತಿಯ ಕುರಿತು ವರದಿ ಕೇಳಿರಬಹುದು. ಮೈತ್ರಿ ಬಗ್ಗೆ ಹೈಕಮಾಂಡ್ ಮಾತ್ರ ನಿರ್ಧಾರ ಮಾಡಲಿದೆ ಎಂದು ಪಕ್ಷದ ಮತ್ತೊಬ್ಬ ಹಿರಿಯ ನಾಯಕರೊಬ್ಬರು ತಿಳಿಸಿದರು.  

‌ಬಿಜೆಪಿಯೊಂದಿಗಿನ ತನ್ನ ಸಂಬಂಧವನ್ನು ಅಂತ್ಯಗೊಳಿಸಿರುವ ಎಐಎಡಿಎಂಕೆ, 2024ರ ಲೋಕಸಭೆ ಚುನಾವಣೆಗೆ ಪ್ರತ್ಯೇಕ ಮೈತ್ರಿ ಕೂಟ ರಚಿಸಿಕೊಳ್ಳುವುದಾಗಿ ಸೋಮವಾರ ಘೋಷಿಸಿತ್ತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT