ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಇಂಡಿಯಾ’ಬಣಕ್ಕೆ ಒಗ್ಗಟ್ಟಿನ ಪಾಠ ಹೇಳಿದ ತಮಿಳುನಾಡು ಸಿಎಂ ಸ್ಟಾಲಿನ್

Published 26 ಜನವರಿ 2024, 16:09 IST
Last Updated 26 ಜನವರಿ 2024, 16:09 IST
ಅಕ್ಷರ ಗಾತ್ರ

ತಿರುಚಿರಾಪಳ್ಳಿ: ಚಂಡೀಗಢ ಮೇಯರ್ ಚುನಾವಣೆಯ ಹಂತದಲ್ಲಿಯೂ ಬಿಜೆಪಿಯು ಪ್ರತಿಪಕ್ಷಗಳ ಮೈತ್ರಿಕೂಟದ ಬಗ್ಗೆ ವಿಚಲಿತಗೊಂಡಿರುವುದನ್ನು ಇಂಡಿಯಾ’ಬಣದ ನಾಯಕರು ಅರಿತುಕೊಳ್ಳಬೇಕು ಎಂದು ಡಿಎಂಕೆ ಅಧ್ಯಕ್ಷ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶುಕ್ರವಾರ ಹೇಳಿದ್ದಾರೆ. ನಮ್ಮ ಒಗ್ಗಟ್ಟು ಕೇಸರಿ ಪಕ್ಷವನ್ನು ಕೇಂದ್ರದಲ್ಲಿ ಅಧಿಕಾರದಿಂದ ದೂರವಿಡುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಇಲ್ಲಿನ ವಿದುತಲೈ ಚಿರುತೈಗಲ್ ಕಚ್ಚಿಯಲ್ಲಿ 'ಪ್ರಜಾಪ್ರಭುತ್ವ ಗೆಲ್ಲುತ್ತದೆ' ಸಮಾವೇಶದಲ್ಲಿ ಮಾತನಾಡಿದ ಸ್ಟಾಲಿನ್, ಇಂಡಿಯಾ ಮೈತ್ರಿಕೂಟ ರಚನೆಯಾಯಿತು. ಅದು ಕೇಂದ್ರದಲ್ಲಿ ಅಧಿಕಾರವನ್ನು ಕಸಿದುಕೊಂಡಿತು ಎಂಬುದು ಭವಿಷ್ಯದ ಇತಿಹಾಸವಾಗಬೇಕು ಎಂದು ಸ್ಟಾಲಿನ್ ಹೇಳಿದರು.

ಚಂಡೀಗಢದ ಮೇಯರ್ ಚುನಾವಣೆ ಮುಂದೂಡಿಕೆ ಮತ್ತು ಎಎಪಿ ಹಾಗೂ ಕಾಂಗ್ರೆಸ್ ಜೊತೆಗಿನ ಮೈತ್ರಿಯನ್ನು ಉಲ್ಲೇಖಿಸಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮೇಯರ್ ಮಟ್ಟದ ಚುನಾವಣೆಯನ್ನು ಸಹ ರದ್ದುಗೊಳಿಸಿದೆ. ಏಕೆಂದರೆ, ಇಲ್ಲಿ ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಗೆಲುವು ಸಾಧಿಸುವ ಸನ್ನಿವೇಶ ಇದೆ ಎಂದು ಅವರು ಹೇಳಿದರು.

ಮೇಯರ್ ಮಟ್ಟದ ಚುನಾವಣೆಯನ್ನೂ ರದ್ದುಗೊಳಿಸಿದ್ದಾರೆಂದರೆ, ಇಂಡಿಯಾ ಮೈತ್ರಿಕೂಟದ ನಾಯಕರು ಬಿಜೆಪಿಯ ಭಯವನ್ನು ಅರಿತುಕೊಳ್ಳಬೇಕು. ಈಗ ಸಿಕ್ಕಿರುವ ಅವಕಾಶವನ್ನು ನಾವು ಬಳಸಿಕೊಳ್ಳಬೇಕು. ನಾವು ಒಗ್ಗಟ್ಟಾಗಿ ನಿಂತರೆ ಬಿಜೆಪಿಗೆ ಸೋಲು ಖಚಿತ. ಪ್ರಜಾಪ್ರಭುತ್ವ ಗೆಲ್ಲುತ್ತದೆ ಮತ್ತು ಸಮಯ ಅದನ್ನೇ ಹೇಳುತ್ತದೆ ಎಂದರು.

ತಮಿಳುನಾಡಿನಲ್ಲಿ ಬಿಜೆಪಿ ಶೂನ್ಯ. ರಾಜ್ಯದ ಬಗ್ಗೆ ನಮಗೆ ಚಿಂತೆ ಇಲ್ಲ. ಬೇರೆ ರಾಜ್ಯಗಳಲ್ಲಿಯೂ ಬಿಜೆಪಿಯನ್ನು ಸೋಲಿಸಬೇಕು. ಪ್ರಜಾಪ್ರಭುತ್ವ ಗೆಲ್ಲುತ್ತದೆ ಎಂಬ ಘೋಷವಾಕ್ಯ ಸಾಲದು. ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದೂ ಸ್ಟಾಲಿನ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT