ಚೆನ್ನೈ: ಯಾವುದೇ ಕಾರಣಕ್ಕೂ ತಮಿಳುನಾಡು ತ್ರಿಭಾಷಾ ಸೂತ್ರ ಪಾಲಿಸುವುದಿಲ್ಲ. ದ್ವಿಭಾಷಾ ಸೂತ್ರವನ್ನೇ ಅನುಸರಿಸಲಾಗುವುದು ಎಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶುಕ್ರವಾರ ಪುನರುಚ್ಚರಿಸಿದ್ದಾರೆ.

ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿಗೆ (ಎನ್ಇಪಿ) ಪರ್ಯಾಯವಾಗಿ ತಮಿಳುನಾಡು ಸರ್ಕಾರ ರೂಪಿಸಿರುವ ಶಾಲಾ ಶಿಕ್ಷಣ ನೀತಿ–2025 (ಎಸ್ಇಪಿ) ಅನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಮಾತೃಭಾಷೆ ತಮಿಳು ನಮ್ಮ ಅಸ್ಮಿತೆ, ನಮ್ಮ ಹೆಮ್ಮೆ. ಎನ್ಇಪಿ ಮೂಲಕ ಹಿಂದಿ ಹೇರಿಕೆ ಮಾಡುವ ಪ್ರಯತ್ನಗಳಿಗೆ ನಾವು ಮಣಿಯುವುದಿಲ್ಲ’ ಎಂದು ಹೇಳಿದರು.

‘ತಮಿಳುನಾಡಿನ ಸಂಸ್ಕೃತಿ, ಭಾಷೆ ಮತ್ತು ಸಾಮಾಜಿಕ ಪರಂಪರೆ ಶಿಕ್ಷಣ ನೀತಿಯಲ್ಲಿ ಅಡಗಿದೆ. ತಮಿಳುನಾಡು ಎಲ್ಲದರಲ್ಲೂ ವಿಶಿಷ್ಟತೆಯನ್ನು ಹೊಂದಿದೆ. ನಮ್ಮಲ್ಲಿ ಪ್ರಗತಿಪರ ಆಲೋಚನೆಗಳಿವೆ. ಇದೆಲ್ಲದರ ಆಧಾರದ ಮೇಲೆ ಶಿಕ್ಷಣ ನೀತಿ ರಚಿಸಲಾಗಿದೆ’ ಎಂದರು.

ಈ ಮೂಲಕ ತಮಿಳುನಾಡು ದೆಹಲಿ ಹೈಕೋರ್ಟ್ನ ನಿವೃತ್ತ ಮುಖ್ಯನ್ಯಾಯಮೂರ್ತಿ ಡಿ.ಮುರುಗೇಶನ್ ಅವರ ನೇತೃತ್ವದ 14 ಸದಸ್ಯರ ಸಮಿತಿಯ ಶಿಫಾರಸು ಆಧರಿಸಿ ನೂತನ ಶಿಕ್ಷಣ ನೀತಿ ಜಾರಿಗೆ ತಂದ ಮೊದಲ ರಾಜ್ಯ ಎನಿಸಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.