ತಿರುಚಿರಾಪಳ್ಳಿ (ತಮಿಳುನಾಡು):ಮಹಿಳೆಯೊಬ್ಬರಿಗೆ ಮಧ್ಯರಾತ್ರಿ ಕರೆ ಮಾಡಿ ಅನುಚಿತವಾಗಿ ಮಾತನಾಡಿದ ಆರೋಪದ ಮೇಲೆ ಪೊಲೀಸ್ ಇನ್‌ಸ್ಪೆಕ್ಟರ್‌ಗೆ ಕಡ್ಡಾಯ ನಿವೃತ್ತಿ ಶಿಕ್ಷೆ ವಿಧಿಸಲಾಗಿದೆ.

ಪೆರಂಬಲೂರು ಜಿಲ್ಲೆಯ ಪೊಲೀಸ್ ಠಾಣೆಗೆ ಮಹಿಳೆಯೊಬ್ಬರು ದೂರೊಂದನ್ನು ನೀಡಿದ್ದರು. ಈ ಸಂಬಂಧ, ಅದೇ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಮಹಿಳೆಗೆ ಮಧ್ಯರಾತ್ರಿ ಕರೆ ಮಾಡಿ ಅನಗತ್ಯವಾದ ಮಾತುಕತೆ ನಡೆಸಿದ್ದಾರೆ.

‘ಪ್ರಕರಣ ಸಂಬಂಧ ಮಹಿಳೆ ನೀಡಿದ ದೂರಿನ ಆಧಾರ ಮೇಲೆ ವಿಚಾರಣೆ ನಡೆಸಲಾಗಿದ್ದು, ಮಹಿಳೆಯ ಆರೋಪದಲ್ಲಿ ಸತ್ಯಾಂಶ ಇದೆ ಎಂಬುದು ಕಂಡುಬಂದಿದೆ. ಈ ಹಿಂದೆಯೂ ಈ ಇನ್‌ಸ್ಪೆಕ್ಟರ್ ವಿರುದ್ಧ ಇದೇ ಬಗೆಯ ಆರೋಪಗಳಿವೆ. ಹಾಗಾಗಿಯೇ ಅವರನ್ನುಪೆರಂಬಲೂರಿಗೆ ವರ್ಗಾವಣೆ ಮಾಡಲಾಗಿತ್ತು. ಈ ಹಿಂದಿನ ಆರೋಪಗಳನ್ನು ಪರಿಗಣಿಸಿ ಈ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.