ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆದೇಶ ಉಲ್ಲಂಘನೆ ಉದ್ದೇಶ ಇರಲಿಲ್ಲ: ರಾಜ್ಯಪಾಲ

Published 22 ಮಾರ್ಚ್ 2024, 15:29 IST
Last Updated 22 ಮಾರ್ಚ್ 2024, 15:29 IST
ಅಕ್ಷರ ಗಾತ್ರ

ನವದೆಹಲಿ: ಪೊನ್ಮುಡಿ ಅವರಿಗೆ ಪ್ರಮಾಣವಚನ ಬೋಧಿಸುವ ವಿಷಯದಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ನಿರಾಕರಿಸುವ ಯಾವುದೇ ಉದ್ದೇಶವಿರಲಲ್ಲ ಎಂದು ರಾಜ್ಯಪಾಲ ಆರ್.ಎನ್‌.ರವಿ ಅವರು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ. 

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ಪೀಠಕ್ಕೆ ಅಟಾರ್ನಿ ಜನರಲ್‌ ಆರ್.ವೆಂಕಟರಮಣಿ ಅವರು ಈ ಸಂಬಂಧ ಪ್ರಮಾಣಪತ್ರ ಸಲ್ಲಿಸಿದ್ದು, ತೀರ್ಪಿನ ಕೆಲವೊಂದು ಅಂಶಗಳನ್ನು ಆಧರಿಸಿ ಈ ಹಿಂದಿನ ನಿಲುವು ತಳೆದಿದ್ದರು ಎಂದು ತಿಳಿಸಿದರು. 

ರಾಜ್ಯಪಾಲರನ್ನು ಪ್ರತಿನಿಧಿಸಿ ನೀಡಿದ್ದ ಈ ಹೇಳಿಕೆಯನ್ನು ಪರಿಗಣಿಸಿದ ಪೀಠ, ಡಿಎಂಕೆ ಈ ಸಂಬಂಧ ಸಲ್ಲಿಸಿದ್ದ ಅರ್ಜಿಯನ್ನು ವಿಲೇವಾರಿ ಮಾಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT