ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಟ್ಕಾ ಹಗರಣ ₹246 ಕೋಟಿ ಆಸ್ತಿ ವಶಕ್ಕೆ

Last Updated 29 ಜುಲೈ 2019, 20:05 IST
ಅಕ್ಷರ ಗಾತ್ರ

ನವದೆಹಲಿ: ತಮಿಳುನಾಡಿನಲ್ಲಿ ನಡೆದ ಹಣ ಅಕ್ರಮ ವರ್ಗಾವಣೆಯ ಗುಟ್ಕಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ₹246 ಕೋಟಿ ಮೌಲ್ಯದ ಆಸ್ತಿಯನ್ನು ಸೋಮವಾರ ವಶಪಡಿಸಿಕೊಂಡಿದೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶದಲ್ಲಿ 174 ಸ್ಥಿರಾಸ್ತಿಗಳನ್ನು ವಶಪಡಿಸಿಕೊಳ್ಳಲು ತಾತ್ಕಾಲಿಕ ಆದೇಶ ಹೊರಡಿಸಿದೆ.

ಸಿಬಿಐ ದಾಖಲಿಸಿರುವ ಎಫ್‌ಐಆರ್‌ನಿಂದ ಮಾಹಿತಿ ಪಡೆದ ಇ.ಡಿ ಗುಟ್ಕಾ ಹಗರಣ ಕುರಿತು ಕ್ರಿಮಿನಲ್‌ ಪ್ರಕರಣ ದಾಖಲಿಸಿದೆ.ಈ ಪ್ರಕರಣದಲ್ಲಿ ರಾಜಕಾರಣಿಗಳು, ಪೊಲೀಸ್‌ ಅಧಿಕಾರಿಗಳು ಮತ್ತಿತರರು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT