ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತಮಿಳುನಾಡು | ಕಳ್ಳಬಟ್ಟಿ ದುರಂತ: ಮೃತರ ಸಂಖ್ಯೆ 47ಕ್ಕೆ ಏರಿಕೆ

Published 21 ಜೂನ್ 2024, 9:35 IST
Last Updated 21 ಜೂನ್ 2024, 9:35 IST
ಅಕ್ಷರ ಗಾತ್ರ

ಚೆನ್ನೈ(ತಮಿಳುನಾಡು): ಕರುಣಾಪುರಂನಲ್ಲಿ ನಡೆದ ಕಳ್ಳಬಟ್ಟಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 47ಕ್ಕೆ ಏರಿದೆ ಎಂದು ತಮಿಳುನಾಡು ಸರ್ಕಾರ ಶುಕ್ರವಾರ ತಿಳಿಸಿದೆ.

ಗುರುವಾರದವರೆಗೆ ಮೃತಪಟ್ಟ 29 ಜನರ ಪಾರ್ಥಿವ ಶರೀರವನ್ನು ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ ಎಂದು ಕಲ್ಲಕುರಿಚ್ಚಿ ಜಿಲ್ಲಾಧಿಕಾರಿ ಪ್ರಶಾಂತ್ ಎಂ.ಎಸ್ ತಿಳಿಸಿದ್ದಾರೆ.

ಘಟನೆ ಬಳಿಕ ಒಟ್ಟು 165 ಜನರನ್ನು ಚಿಕಿತ್ಸೆಗಾಗಿ ಕಲ್ಲಕುರಿಚಿ, ಜಿಪ್ಮರ್, ಸೇಲಂ ಮತ್ತು ಮುಂಡಿಯಂಬಕ್ಕಂ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿತ್ತು. ಅವರಲ್ಲಿ ಇದುವರೆಗೆ 47 ಮಂದಿ ಸಾವಿಗೀಡಾಗಿದ್ದು, ಚಿಕಿತ್ಸೆ ಪಡೆಯುತ್ತಿರುವ 118 ಮಂದಿಯಲ್ಲಿ 30 ಜನರ ಸ್ಥಿತಿ ಗಂಭೀರವಾಗಿದೆ. ಮೂವರು ಚೇತರಿಸಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ತಡೆಯಲು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ತೀವ್ರ ಕಾರ್ಯಾಚರಣೆ ನಡೆಸುವಂತೆ ತಿಳಿಸಲಾಗಿದೆ. ವಿಷ ಪೂರಿತ ಮದ್ಯ ಸೇವಿಸಿದವರು ಸ್ವಯಂ ಪ್ರೇರಿತವಾಗಿ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳಿ ಎಂದೂ ಅವರು ಮನವಿ ಮಾಡಿದ್ದಾರೆ.

ಮೆಥನಾಲ್‌ ಮಿಶ್ರಿತ ಕಳ್ಳಬಟ್ಟಿ ಸೇವನೆ ಸಾವಿಗೆ ಕಾರಣ ಎಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಗುರುವಾರ ತಿಳಿಸಿದ್ದಾರೆ. ಭವಿಷ್ಯದಲ್ಲಿ ಇಂತಹ ಪ್ರಕರಣ ತಡೆಯಲು ಪರಿಶೀಲಿಸಿ ವರದಿ ನೀಡಲು ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚಿಸಲಾಗುವುದು ಎಂದಿದ್ದಾರೆ.

ಮೃತರ ಕುಟುಂಬಸ್ಥರಿಗೆ ತಲಾ ₹10 ಲಕ್ಷ ಪರಿಹಾರ:

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಮೃತರ ಕುಟುಂಬದ ಸದಸ್ಯರಿಗೆ ತಲಾ ₹10 ಲಕ್ಷ, ಚಿಕಿತ್ಸೆ ಪಡೆಯುತ್ತಿರುವವರಿಗೆ ₹50 ಸಾವಿರ ಆರ್ಥಿಕ ನೆರವು ನೀಡಲಾಗುವುದು ಎಂದು ಸ್ಟಾಲಿನ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT