ಚೆನ್ನೈ: ತಮಿಳನಾಡಿನಲ್ಲಿ ನೂತನ ಸರ್ಕಾರ ರಚಿಸಲು ಕಸರತ್ತು ಮುಂದುವರಿದಿದ್ದು, ಗುರುವಾರವೂ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿಯಾಗಿರುವ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್, ನೂತನ ಸರ್ಕಾರ ರಚಿಸಲು ಆಹ್ವಾನಿಸುವಂತೆ ಕೋರಿದ್ದಾರೆ.

ಆದರೆ ಟಿವಿಕೆಗೆ ಸಂಖ್ಯಾಬಲದ ಕೊರತೆಯಿದ್ದು, ಸರ್ಕಾರ ರಚಿಸಲು ಬೇಕಾದ ಬಹುಮತವಿಲ್ಲ ಎಂದು ವಿಜಯ್ ಅವರಿಗೆ ಅರ್ಲೇಕರ್ ವಿವರಿಸಿದ್ದಾರೆ ಎಂದು ತಮಿಳುನಾಡಿನ ಲೋಕಭವನ ತಿಳಿಸಿದೆ.

ಬುಧವಾರ ರಾಜ್ಯಪಾಲ ಅರ್ಲೆಕರ್ ಅವರನ್ನು ಭೇಟಿಯಾಗಿದ್ದ ವಿಜಯ್, ಸರ್ಕಾರ ರಚಿಸಲು ಹಕ್ಕು ಮಂಡಿಸಿದರು. ಆದರೆ ಸಂಖ್ಯಾಬಲದ ದಾಖಲೆಯನ್ನು ಕೇಳಿದ ರಾಜ್ಯಪಾಲರು ಗುರುವಾರ ಎರಡನೇ ಬಾರಿಗೆ ಮಾತುಕತೆಗಾಗಿ ಆಹ್ವಾನಿಸಿದರು.

ಮಾತುಕತೆಯ ಸಂದರ್ಭದಲ್ಲಿ ತಮಿಳುನಾಡು ವಿಧಾನಸಭೆಯಲ್ಲಿ ಸರ್ಕಾರ ರಚಿಸಲು ಟಿವಿಕೆಗೆ ಬಹುಮತ ಇಲ್ಲ ಎಂದು ರಾಜ್ಯಪಾಲರು ವಿವರಿಸಿದ್ದಾರೆ ಎಂದು ಲೋಕಭವನದ ಪ್ರಕಟಣೆ ತಿಳಿಸಿದೆ.

24 ತಾಸಿನ ಅವಧಿಯಲ್ಲಿ ಎರಡನೇ ಸಲ ಸರ್ಕಾರ ರಚನೆಗೆ ಸಂಬಂಧಿಸಿದಂತೆ ರಾಜ್ಯಪಾಲರನ್ನು ವಿಜಯ್ ಭೇಟಿಯಾಗಿದ್ದರು.

234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ 108 ಸ್ಥಾನಗಳಲ್ಲಿ ಗೆದ್ದಿರುವ ಟಿವಿಕೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಾಂಗ್ರೆಸ್ನ ಐವರು ಶಾಸಕರ ಬೆಂಬಲದ ಹೊರತಾಗಿಯೂ ಬಹುಮತಕ್ಕೆ ಬೇಕಾಗಿರುವ ಅಧಿಕೃತ ಸಂಖ್ಯಾಬಲದ ಕೊರತೆ ಕಾಡುತ್ತಿದೆ.
.ಸರ್ಕಾರ ರಚನೆ ಕಸರತ್ತು: 24 ತಾಸಿನಲ್ಲಿ 2ನೇ ಸಲ ರಾಜ್ಯಪಾಲರನ್ನು ಭೇಟಿಯಾದ ವಿಜಯ್.ಪಟ್ಟು ಬಿಡದ ನಾಯಕರು: ಕೇರಳಂನಲ್ಲಿ ಭಾನುವಾರದೊಳಗೆ ನೂತನ ಸಿಎಂ ಆಯ್ಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.