ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸನಾತನ ಧರ್ಮದ ಕುರಿತು ಹೇಳಿಕೆ: ಬೆಂಗಳೂರು ನ್ಯಾಯಾಲಯಕ್ಕೆ ಉದಯನಿಧಿ ಹಾಜರು ಸಾಧ್ಯತೆ

Published 25 ಜೂನ್ 2024, 4:39 IST
Last Updated 25 ಜೂನ್ 2024, 4:39 IST
ಅಕ್ಷರ ಗಾತ್ರ

ಬೆಂಗಳೂರು/ಚೆನ್ನೈ: ಸನಾತನ ಧರ್ಮಕ್ಕೆ ಅವಮಾನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ಇಂದು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆಯಿದೆ.

ಸಾಮಾಜಿಕ ಕಾರ್ಯಕರ್ತ ಪರಮೇಶ್ ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ ನ್ಯಾಯಾಲಯ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ನ್ಯಾಯಾಲಯಕ್ಕೆ ಹಾಜರಾಗಲು ಸೋಮವಾರ ರಾತ್ರಿಯೇ ಉದಯನಿಧಿ ಅವರು ಬೆಂಗಳೂರಿನ ಕಡೆ ಪ್ರಯಾಣ ಬೆಳೆಸಿದ್ದಾರೆ ಎಂದು ವರದಿಯಾಗಿದೆ.

2023ರ ಸೆಪ್ಟೆಂಬರ್ 4ರಂದು ಚೆನ್ನೈನ ತೇನಂಪೇಟೆಯಲ್ಲಿ ನಡೆದಿದ್ದ ಸನಾತನ ಧರ್ಮ ನಿರ್ಮೂಲನಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ್ದ ಉದಯನಿಧಿ, ‘ಸನಾತನ ಧರ್ಮ ಡೆಂಗಿ, ಮಲೇರಿಯಾ ಹಾಗೂ ಕೊರೊನಾ ಇದ್ದಂತೆ. ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ಅದು ವಿರುದ್ಧವಾಗಿದೆ. ಅದನ್ನು ನಿರ್ಮೂಲನೆ ಮಾಡಬೇಕು’ ಎಂದು ಹೇಳಿದ್ದರು.

ಈ ಹೇಳಿಕೆಯನ್ನು ಅನೇಕರು ಖಂಡಿಸಿದ್ದು, ಉದಯನಿಧಿ ಅವರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT