ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಪ್ಪು ಮಾಹಿತಿ ಪೋಸ್ಟ್‌: ಅಣ್ಣಾಮಲೈ ವಿರುದ್ಧ ಪ್ರಕರಣ

Published 23 ಏಪ್ರಿಲ್ 2024, 15:44 IST
Last Updated 23 ಏಪ್ರಿಲ್ 2024, 15:44 IST
ಅಕ್ಷರ ಗಾತ್ರ

ಚೆನ್ನೈ: ಡಿಎಂಕೆ ಕಾರ್ಯಕರ್ತರು ಕಡಲೂರು ಜಿಲ್ಲೆಯ ಪಕ್ಕಿರಿಮಣಿಯಂ ಎಂಬ ಗ್ರಾಮದ 45 ವರ್ಷದ ಮಹಿಳೆಯೊಬ್ಬರನ್ನು ಥಳಿಸಿ, ಹತ್ಯೆ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ‘ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿ’ ಪೋಸ್ಟ್‌ ಮಾಡಿದ ಆರೋಪದಡಿ ಬಿಜೆಪಿಯ ತಮಿಳುನಾಡು ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕಡಲೂರು ಜಿಲ್ಲಾ ಪೊಲೀಸರು ಅಣ್ಣಾಮಲೈ ವಿರುದ್ಧ ಸೋಮವಾರ ಪ್ರಕರಣ ದಾಖಲಿಸಿದ್ದಾರೆ.

ಇದೇ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿಯನ್ನು ಹಬ್ಬಿಸಿದ್ದಕ್ಕಾಗಿ ಮೂವರ ವಿರುದ್ಧ ಪೊಲೀಸರು ಪ್ರತ್ಯೇಕ ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

‘ಲೋಕಸಭೆ ಚುನಾವಣೆ ಅಂಗವಾಗಿ ಏಪ್ರಿಲ್‌ 19ರಂದು ನಡೆದಿದ್ದ ಮತದಾನದ ವೇಳೆ, ಆಡಳಿತಾರೂಢ ‍‍ಡಿಎಂಕೆ ವಿರುದ್ಧ ಗೋಮತಿ ಎಂಬುವವರು ಮತ ಚಲಾವಣೆ ಮಾಡಿದ್ದಕ್ಕೆ ಪಕ್ಷದ ಕಾರ್ಯಕರ್ತರು ಆಕೆಯನ್ನು ಥಳಿಸಿ, ಕೊಂದಿದ್ದರು. ಗೋಮತಿ ಅವರನ್ನು ಹತ್ಯೆ ಮಾಡಿರುವ ಡಿಎಂಕೆ ಕಾರ್ಯಕರ್ತರ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿಲ್ಲ’ ಎಂದು ಆರೋಪಿಸಿ ಅಣ್ಣಾಮಲೈ ಏಪ್ರಿಲ್‌ 21ರಂದು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT