ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗುಜರಾತ್ | ಕೊಳವೆ ಬಾವಿಗೆ ಬಿದ್ದು ಒಂದೂವರೆ ವರ್ಷದ ಬಾಲಕಿ ಸಾವು

Published 15 ಜೂನ್ 2024, 5:14 IST
Last Updated 15 ಜೂನ್ 2024, 5:14 IST
ಅಕ್ಷರ ಗಾತ್ರ

ಅಮ್ರೇಲಿ: ಗುಜರಾತ್‌ನ ಅಮ್ರೇಲಿ ಜಿಲ್ಲೆಯ ಸೂರಜ್‌ಪುರ ಗ್ರಾಮದಲ್ಲಿ 50 ಅಡಿ ಕೊಳವೆ ಬಾವಿಗೆ ಬಿದ್ದು ಒಂದೂವರೆ ವರ್ಷದ ಬಾಲಕಿ ಮೃತಪಟ್ಟಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ಮಧ್ಯಾಹ್ನ 12.30ರ ಹೊತ್ತಿಗೆ ಬಾಲಕಿ ಕೊಳವೆ ಬಾವಿಗೆ ಬಿದ್ದಿದ್ದಳು. 500 ಅಡಿಯಿದ್ದ ಕೊಳವೆ ಬಾವಿಯ 50 ಅಡಿ ಆಳದಲ್ಲಿ ಬಾಲಕಿ ಸಿಲುಕಿಕೊಂಡಿದ್ದಳು. ಮಾಹಿತಿ ತಿಳಿದು ಸ್ಥಳಕ್ಕಾಮಿಸಿದ ಅಗ್ನಿಶಾಮಕ ದಳ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿತ್ತು. ರಾತ್ರಿ 10.20ರ ಹೊತ್ತಿಗೆ ಎನ್‌ಡಿಆರ್‌ಎಫ್ ತಂಡ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ಮುಂದುವರಿಸಿತ್ತು.

17 ಗಂಟೆಗಳ ಸುದೀರ್ಘ ರಕ್ಷಣಾ ಕಾರ್ಯಾಚರಣೆ ನಂತರ ಶನಿವಾರ ಮುಂಜಾನೆ 5 ಗಂಟೆಯ ಹೊತ್ತಿಗೆ ಬಾಲಕಿಯನ್ನು ಹೊರತೆಗೆಯಲಾಗಿತ್ತು. ಪ್ರಜ್ಞಾಹೀನಳಾಗಿದ್ದ ಆಕೆಯನ್ನು ಹತ್ತಿರ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಆಕೆ ಅದಾಗಲೇ ಮೃತಪಟ್ಟಿದ್ದಳು ಎಂದು ವೈದ್ಯರು ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT