ಬುಧವಾರ, 27 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೊಮೆಟೊ ಬೆಲೆ ಏರಿಕೆ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ

Published 27 ಜೂನ್ 2023, 11:36 IST
Last Updated 27 ಜೂನ್ 2023, 11:36 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಹಲವೆಡೆ ಟೊಮೆಟೊ, ಈರುಳ್ಳಿ, ಆಲೂಗೆಡ್ಡೆ ಬೆಲೆ ಗಗನಕ್ಕೇರಿದ್ದು, ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ. ತಪ್ಪು ನೀತಿಗಳಿಂದಾಗಿ ಬೆಲೆಗಳಲ್ಲಿ ಹಠಾತ್‌ ಏರಿಕೆ ಕಂಡುಬಂದಿದೆ ಎಂದು ಆರೋಪಿಸಿದೆ.

ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌, ‘ಪ್ರಧಾನಿ ಮೋದಿಯವರು ಟೊಮೆಟೊ, ಈರುಳ್ಳಿ ಮತ್ತು ಆಲೂಗೆಡ್ಡೆ ತರಕಾರಿಗಳಿಗೆ ಪ್ರಮುಖ ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದ್ದರು. ಆದರೆ ತಪ್ಪು ನೀತಿಗಳಿಂದಾಗಿ ಮೊದಲು ಬೀದಿಗೆ ಎಸೆಯಲಾಗುತ್ತಿದ್ದ ಟೊಮೆಟೊಗಳನ್ನು ಈಗ ಪ್ರತಿ ಕೆ.ಜಿಗೆ ₹100 ರಂತೆ ಮಾರಾಟ ಮಾಡಲಾಗುತ್ತಿದೆ’ ಎಂದು ಟ್ಟೀಟ್‌ ಮೂಲಕ ಟೀಕಿಸಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿನ ಆಜಾದ್‌ಪುರ ಮಂಡಿ ಸೇರಿದಂತೆ ಹಲವಾರು ಸ್ಥಳಗಳಲ್ಲಿ ಪ್ರತಿ ಕೆ.ಜಿ ಟೊಮೆಟೊವನ್ನು ₹80 ರಿಂದ 100 ರಂತೆ ಮಾರಾಟ ಮಾಡಲಾಗುತ್ತಿದೆ.

ಉತ್ತರ ಭಾರತದ ವಿವಿಧ ಪ್ರದೇಶಗಳಲ್ಲಿ ಬಾರಿ ಮಳೆಯಿಂದಾಗಿ ಟೊಮೆಟೊ ಬೆಳೆಗಳು ಹಾನಿಗೊಳಗಾಗಿದ್ದು, ಇದರಿಂದಾಗಿ ಸಗಟು ಮಾರುಕಟ್ಟೆಯಲ್ಲಿ ಪೂರೈಕೆಯ ಲಭ್ಯತೆಯನ್ನು ಸೀಮಿತಗೊಳಿಸಲಾಗಿದೆ ಎಂದು ಸಗಟು ವ್ಯಾಪಾರಿಗಳ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT