ನವದೆಹಲಿ: ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸುವ ‘ಟೂಲ್‌ಕಿಟ್’ ಹಂಚಿಕೊಂಡ ಆರೋಪದ ಮೇಲೆ ಬಂಧಿತರಾಗಿರುವ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರು, ತನಿಖೆಗೆ ಸಂಬಂಧಿಸಿದ ಸಾಮಗ್ರಿಗಳನ್ನು ಪೊಲೀಸರು ಮಾಧ್ಯಮಗಳಿಗೆ ಸೋರಿಕೆ ಮಾಡದಂತೆ ತಡೆಯಲು ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

ತನ್ನ ಮತ್ತು ಮೂರನೇ ವ್ಯಕ್ತಿಗಳ ನಡುವೆ ನಡೆದಿರುವ ವಾಟ್ಸ್‌ಆ್ಯಪ್ ಸಂದೇಶ ಸೇರಿದಂತೆ ಯಾವುದೇ ಖಾಸಗಿ ಚಾಟ್‌ಗಳ ವಿಷಯಗಳನ್ನು ಪ್ರಕಟಿಸದಂತೆ ಮಾಧ್ಯಮಗಳ ಮೇಲೆ ತಡೆ ಹೇರುವಂತೆಯೂ ಅರ್ಜಿಯಲ್ಲಿ ಕೋರಲಾಗಿದೆ.

ದಿಶಾ ಅವರನ್ನು ಪ್ರತಿನಿಧಿಸುವ ವಕೀಲರಲ್ಲಿ ಒಬ್ಬರಾದ ಅಭಿನವ್ ಸೆಖ್ರಿ ಅವರು, ಈ ಕುರಿತು ವಿಚಾರಣೆಗೆ ಹೈಕೋರ್ಟ್‌ನಲ್ಲಿ ಪಟ್ಟಿ ಸಿದ್ಧವಾಗುವುದನ್ನು ಕಾಯುತ್ತಿದ್ದೇನೆ. ಬಳಿಕವಷ್ಟೇ ಈ ಬಗ್ಗೆ ಪ್ರತಿಕ್ರಿಯಿಸಬಹುದು ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್‌ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.