ನವದೆಹಲಿ: ಬಿಜೆಪಿ ಮುಖಂಡ ಸಂಬಿತ್ ಪಾತ್ರಾ ಅವರು ಮಾಡಿದ್ದ ಟ್ವೀಟ್‌ನಲ್ಲಿ ಲಗತ್ತಿಸಲಾಗಿದ್ದ ಟೂಲ್‌ಕಿಟ್ ಅನ್ನು ತಿರುಚಲಾಗಿದೆ ಎಂಬುದಾಗಿ ವರ್ಗೀಕರಿಸಿದ್ದು ಹೇಗೆ ಎಂದು ದೆಹಲಿ ಪೊಲೀಸರು ಟ್ವಿಟರ್ ಸಂಸ್ಥೆಯನ್ನು ಪ್ರಶ್ನಿಸಿದ್ದಾರೆ. ಇದರ ಹಿಂದಿರುವ ಸತ್ಯವನ್ನು ಬಹಿರಂಗಪಡಿಸುವಂತೆ ಕೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಸರ್ಕಾರವನ್ನು ಗುರಿಯಾಗಿಸಲು ಕಾಂಗ್ರೆಸ್ ಸಿದ್ಧಪಡಿಸಿದೆ ಎಂದು ಹೇಳಲಾದ ‘ಟೂಲ್‌ಕಿಟ್’ ಬಗ್ಗೆ ಪಾತ್ರಾ ಅವರು ಮಾಡಿದ್ದ ಟ್ವೀಟ್ ಕುರಿತು ವಿಶೇಷ ಘಟಕವು ತನಿಖೆ ನಡೆಸುತ್ತಿದೆ ಎಂದು ವಕ್ತಾರರು ತಿಳಿಸಿದ್ದಾರೆ. ಟ್ವಿಟರ್ ಸಂಸ್ಥೆಯು ಪಾತ್ರಾ ಅವರ ಟ್ವೀಟ್ ತಿರುಚಿದ್ದು ಎಂದು ಯಾವ ಆಧಾರದ ಮೇಲೆ ನಿರ್ಧರಿಸಿದೆ ಎಂದು ಪ್ರಶ್ನಿಸಲಾಗಿದೆ. ‘ತನಿಖೆಯ ಭಾಗವಾಗಿ ಈ ಪ್ರಶ್ನೆಗೆ ಉತ್ತರದ ಅಗತ್ಯವಿದೆ. ತನಿಖೆ ನಡೆಸುತ್ತಿರುವ ವಿಶೇಷ ಘಟಕವು ಸತ್ಯವನ್ನು ತಿಳಿಯಬಯಸಿದೆ. ಟ್ವಿಟರ್ ಇದಕ್ಕೆ ಸ್ಪಷ್ಟನೆ ನೀಡಬೇಕು’ ಎಂದು ಪೊಲೀಸ್ ಇಲಾಖೆಯ ವಕ್ತಾರರು ತಿಳಿಸಿದ್ದಾರೆ.

ಕಾಂಗ್ರೆಸ್ ನೀಡಿದ ದೂರು ಆಧರಿಸಿ, ಪಾತ್ರಾ ಹಾಗೂ ಕೆಲವರ ಟ್ವೀಟ್‌ಗಳಿಗೆ ‘ತಿರುಚಿದ ಮಾಹಿತಿ’ ಎಂಬ ಟ್ಯಾಗ್ ಅನ್ನು ಟ್ವಿಟರ್ ಸೇರಿಸಿತ್ತು. ತನಿಖೆಯ ಮೇಲೆ ಪರಿಣಾಮ ಬೀರುವ ಕಾರಣ, ಟ್ಯಾಗ್ ಅನ್ನು ತೆಗೆಯುವಂತೆ ಕೇಂದ್ರ ಸರ್ಕಾರವು ಟ್ವಿಟರ್‌ಗೆ ಸೂಚಿಸಿತ್ತು.

ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್ ಪರಿಸ್ಥಿತಿಯನ್ನು ಸೂಕ್ತವಾಗಿ ನಿರ್ವಹಿಸಿಲ್ಲ ಎಂಬುದಾಗಿ ಅಪಪ್ರಚಾರ ನಡೆಸಲು ‘ಟೂಲ್‌ಕಿಟ್’ ಸೃಷ್ಟಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಬಿಜೆಪಿಯೇ ಈ ಟೂಲ್‌ಕಿಟ್ ಸೃಷ್ಟಿಸಿದೆ ಎಂದು ಕಾಂಗ್ರೆಸ್ ಪ್ರತ್ಯಾರೋಪ ಮಾಡಿದೆ. ಈ ವಿಚಾರವಾಗಿ ಕಾಂಗ್ರೆಸ್–ಬಿಜೆಪಿ ವಾಕ್ಸಮರದಲ್ಲಿ ತೊಡಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.