ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Top 10 | ಈ ದಿನದ ಪ್ರಮುಖ 10 ಸುದ್ದಿಗಳು, 03 ನವೆಂಬರ್ 2023

Published 3 ನವೆಂಬರ್ 2023, 13:23 IST
Last Updated 3 ನವೆಂಬರ್ 2023, 13:23 IST
ಅಕ್ಷರ ಗಾತ್ರ
Introduction

ಚಳಿಗಾಲದ ಅಧಿವೇಶನ ಡಿ.4ರಿಂದ ಸಾಧ್ಯತೆ, ರೇವ್ ಪಾರ್ಟಿಯಲ್ಲಿ ಹಾವಿನ ವಿಷ ಬಳಕೆ ಆರೋಪದಡಿ ಬಿಗ್‌ಬಾಸ್ ವಿಜೇತ ಎಲ್ವಿಶ್ ವಿರುದ್ಧ ಎಫ್‌ಐಆರ್, ಶ್ರೀಲಂಕಾ ಹಿಂದೂ ದೇವಾಲಯಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ, ಇರಾನ್ ಅಗ್ನಿ ಅವಘಡದಲ್ಲಿ 32 ಮಂದಿ ಸಾವು ಸೇರಿ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ.

1

ಲೋಕಸಭೆ ಚುನಾವಣೆ: 3-4 ದಿನಗಳಲ್ಲಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಲ್ಲಿಸಲಿರುವ ಸಮೀಕ್ಷಾ ತಂಡ- ಡಿ.ಕೆ.ಶಿ

ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ರಚಿಸಲಾಗಿರುವ ಸಮೀಕ್ಷಾ ತಂಡವು 3-4 ದಿನಗಳೊಳಗೆ ತನ್ನ ವರದಿ ಸಲ್ಲಿಸಲಿದೆ ಎಂದು ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಸಂಪೂರ್ಣ ಸುದ್ದಿ ಓದಿ..

2

ಬೆಳಗಾವಿ: ಚಳಿಗಾಲದ ಅಧಿವೇಶನ ಡಿ.4ರಿಂದ ಸಾಧ್ಯತೆ– ಖಾದರ್

ಹುಬ್ಬಳ್ಳಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನವು ಬಹುತೇಕ ಡಿಸೆಂಬರ್‌ 4ರಿಂದ ಆರಂಭವಾಗಬಹುದು. ಸದ್ಯದಲ್ಲಿಯೇ ಅಧಿಕೃತವಾಗಿ ಘೋಷಣೆಯಾಗಲಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಹೇಳಿದರು. ಉತ್ತರ ಕರ್ನಾಟಕ ಜನರ ಆಶಯಕ್ಕೆ ಒತ್ತು ಕೊಟ್ಟು ಅಧಿವೇಶನ ನಡೆಸಲಾಗುವುದು. ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಮಹತ್ವ ನೀಡಲಾಗುವುದು ಎಂದರು.

ಸಂಪೂರ್ಣ ಸುದ್ದಿ ಓದಿ..

3

ಹೊಸ ಪಡಿತರ ಚೀಟಿ ಕೋರಿ 2.95 ಲಕ್ಷ ಅರ್ಜಿ: ಸಚಿವ ಮುನಿಯಪ್ಪ

ಹೊಸ ಪಡಿತರ ಚೀಟಿ ಕೋರಿ 2.95 ಲಕ್ಷ ಅರ್ಜಿ ಸಲ್ಲಿಕೆಯಾಗಿದ್ದು, ಇವುಗಳನ್ನು ಪರಿಶೀಲಿಸಿ, ಶೀಘ್ರದಲ್ಲಿ ವಿತರಿಸಲಾಗುವುದು’ ಎಂದು ಆಹಾರ ಮತ್ತು ನಾಗರಿಕ ಪೂರೈಕೆಗಳ ಸಚಿವ ಕೆ.ಎಚ್‌. ಮುನಿಯಪ್ಪ ಹೇಳಿದರು.

ಸಂಪೂರ್ಣ ಸುದ್ದಿ ಓದಿ..

4

ರೇವ್ ಪಾರ್ಟಿಯಲ್ಲಿ ಹಾವಿನ ವಿಷ ಬಳಕೆ: ಬಿಗ್‌ಬಾಸ್ ವಿಜೇತ ಎಲ್ವಿಶ್ ವಿರುದ್ಧ ಎಫ್‌ಐಆರ್

ರೇವ್ ಪಾರ್ಟಿಯಲ್ಲಿ ಹಾವಿನ ವಿಷವನ್ನು ಬಳಸಿದ ಆರೋಪದ ಮೇಲೆ ಪಾರ್ಟಿ ಆಯೋಜಿಸಿದ್ದ ಯೂಟ್ಯೂಬರ್ ಮತ್ತು ಹಿಂದಿಯ ಬಿಗ್ ಬಾಸ್ ಓಟಿಟಿ ರಿಯಾಲಿಟಿ ಶೋ ವಿಜೇತ ಎಲ್ವಿಶ್ ಯಾದವ್ ವಿರುದ್ಧ ಉತ್ತರ ಪ್ರದೇಶದ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ನೋಯ್ಡಾದಲ್ಲಿ ರೇವ್ ಪಾರ್ಟಿಗಳಿಗೆ ಹಾವು ಮತ್ತು ಹಾವಿನ ವಿಷ ಸರಬರಾಜು ಮಾಡಿದ ಆರೋಪ ಸಂಬಂಧ ಐವರನ್ನು ಬಂಧಿಸಲಾಗಿದೆ.

ಸಂಪೂರ್ಣ ಸುದ್ದಿ ಓದಿ..

5

ಶ್ರೀಲಂಕಾದ ಪ್ರಸಿದ್ಧ ಹಿಂದೂ ದೇವಾಲಯಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ

ಮೂರು ದಿನಗಳ ಶ್ರೀಲಂಕಾ ಪ್ರವಾಸದಲ್ಲಿರುವ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಶುಕ್ರವಾರ ಶ್ರೀಲಂಕಾದ ಜಾಫ್ನಾದಲ್ಲಿರುವ ಪ್ರಸಿದ್ಧ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ಸಂಪೂರ್ಣ ಸುದ್ದಿ ಓದಿ..

6

ಶ್ರೀಕೃಷ್ಣ ಆಶೀರ್ವದಿಸಿದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ: ಕಂಗನಾ ರನೌತ್‌

ಬಾಲಿವುಡ್ ನಟಿ ಕಂಗನಾ ರನೌತ್‌ ಅವರು ರಾಜಕೀಯ ಪ್ರವೇಶ ಮಾಡುವ ಸುಳಿವು ನೀಡಿದ್ದಾರೆ. ‘ಶ್ರೀಕೃಷ್ಣ ಆಶೀರ್ವಾದ ಮಾಡಿದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ’ ಎಂದು ಹೇಳಿದ್ದಾರೆ.

ಸಂಪೂರ್ಣ ಸುದ್ದಿ ಓದಿ..

7

ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ವೈ.ಎಸ್. ಶರ್ಮಿಳಾ

ತೆಲಂಗಾಣ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ವೈಎಸ್‌ಆರ್ ತೆಲಂಗಾಣ ಪಕ್ಷ (ವೈಎಸ್‌ಆರ್‌ಟಿಪಿ) ಸ್ಫರ್ಧೆಯಿಂದ ಹಿಂದೆ ಸರಿದಿದೆ. ಪಕ್ಷದ ಮುಖಂಡರೊಂದಿಗೆ ಚರ್ಚೆ ನಡೆಸಿದ್ದು, ಕಾಂಗ್ರೆಸ್‌ಗೆ ಬೆಂಬಲ ನೀಡಲು ನಿರ್ಧರಿಸಿದ್ದೇವೆ ಎಂದು ವೈಎಸ್‌ಆರ್‌ಟಿಪಿ ಮುಖ್ಯಸ್ಥೆ ವೈ.ಎಸ್‌.ಶರ್ಮಿಳಾ ಹೇಳಿದ್ದಾರೆ.

ಸಂಪೂರ್ಣ ಸುದ್ದಿ ಓದಿ..

8

'ಮೈ ಲಾರ್ಡ್' ಸಂಬೋಧನೆ ನಿಲ್ಲಿಸಿದರೆ ನನ್ನ ಅರ್ಧ ಸಂಬಳ ನೀಡುವೆ: ನ್ಯಾ. ನರಸಿಂಹ

9

ಗಾಜಾದಲ್ಲಿ ಮಕ್ಕಳ ಸಾವು: ಹಿಂಸಾಚಾರವನ್ನು ಕೊನೆಗಾಣಿಸುವಂತೆ ಇರ್ಫಾನ್ ಪಠಾಣ್ ಮನವಿ

ಇಸ್ರೇಲ್ ಹಾಗೂ ಹಮಾಸ್ ನಡುವಣ ಯುದ್ಧದಲ್ಲಿ ಅಪಾರ ಪ್ರಾಣಹಾನಿ ಸಂಭವಿಸಿದೆ. ಗಾಜಾಪಟ್ಟಿಯಲ್ಲಿ ಅನೇಕ ಮಕ್ಕಳು ಸಾವಿಗೀಡಾಗಿದ್ದಾರೆ. ಈ ಕುರಿತು ಧ್ವನಿ ಎತ್ತಿರುವ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಇರ್ಫಾನ್ ಪಠಾಣ್, ಯುದ್ಧ ನಿಲ್ಲಿಸುವ ನಿಟ್ಟಿನಲ್ಲಿ ವಿಶ್ವ ನಾಯಕರು ತಕ್ಷಣ ಕಾರ್ಯಪ್ರವೃತರಾಗಬೇಕು ಎಂದು ಬೇಡಿಕೊಂಡಿದ್ದಾರೆ.

ಸಂಪೂರ್ಣ ಸುದ್ದಿ ಓದಿ..

10

ಇರಾನ್‌ನಲ್ಲಿ ಪುನರ್ವಸತಿ ಕೇಂದ್ರದಲ್ಲಿ ಬೆಂಕಿ ಅವಘಡ: 32 ಮಂದಿ ದುರ್ಮರಣ

ಬೆಂಕಿ ಅವಘಡ–ಪ್ರಾತಿನಿಧಿಕ ಚಿತ್ರ

ಬೆಂಕಿ ಅವಘಡ–ಪ್ರಾತಿನಿಧಿಕ ಚಿತ್ರ

ಉತ್ತರ ಇರಾನ್‌ನಲ್ಲಿರುವ ಪುನರ್ವಸತಿ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 32 ಮಂದಿ ಸಾವಿಗೀಡಾಗಿದ್ದು, 16 ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಗಿಲಾನ್‌ನ ಕ್ಯಾಸ್ಪಿಯನ್ ಸಮುದ್ರ ಪ್ರಾಂತ್ಯದ ಲಾಂಗರುಡ್‌ನಲ್ಲಿರುವ ಮಾದಕ ದ್ರವ್ಯ ವ್ಯಸನಿಗಳ ಪುನರ್ವಸತಿ ಕೇಂದ್ರದಲ್ಲಿ ಈ ಘಟನೆ ನಡೆಸಿದೆ.

ಸಂಪೂರ್ಣ ಸುದ್ದಿ ಓದಿ..